ಜೈ ಶ್ರೀರಾಮ್ ಘೋಷಣೆ ಕೂಗುವವರೆಲ್ಲ ಸಾಧುಗಳಲ್ಲ – ಕಾಂಗ್ರೆಸ್ ಮುಖಂಡ

ನವದೆಹಲಿ: ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವವರೆಲ್ಲಾ ಸಾಧುಗಳಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ರಶೀದ್ ಅಳ್ವಿ ಹೇಳಿದ್ದಾರೆ.

ಅಳ್ವಿಯವರ ಈ ಹೇಳಿಕೆಗೆ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರಿಂದ ತೀಕ್ಷ್ಣವಾದ ಪ್ರತಿಕ್ರಿಯೆ ಬಂದಿದ್ದು, ಈ ರೀತಿ ಹೇಳುವವರೆಲ್ಲಾ; ರಾಕ್ಷಸರು”; ಎಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಉತ್ತರಪ್ರದೇಶದ ಸಂಭಾಲ್​ನಲ್ಲಿ ಗುರುವಾರ ರಾತ್ರಿ ನಡೆದ “ಕಲ್ಕಿ ಮಹೋತ್ಸವದಲ್ಲಿ ಅಳ್ವಿ ಈ ಹೇಳಿಕೆ ನೀಡಿದ್ದಾರೆ. ಜೈ ಶ್ರೀ ರಾಮ್ ಘೋಷಣೆ ಕೂಗುವ ಮೂಲಕ ಕೆಲವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಅವರೆಲ್ಲಾರು ಮುನಿಗಳು (ಋಷಿಗಳು) ಅಲ್ಲ” ಮತ್ತು ಇಂತಹವರಿಂದ ಎಚ್ಚರವಾಗಿರಬೇಕಾದ ಅಗತ್ಯವಿದೆ. ರಾಮರಾಜ್ಯದಲ್ಲಿ ದ್ವೇಷಕ್ಕೆ ಯಾವುದೇ ಅವಕಾಶವಿಲ್ಲ ಎಂದು ಕಾಂಗ್ರೆಸ್ ನಾಯಕ ಅಳ್ವಿ ಹೇಳಿದ್ದಾರೆ.

Latest Indian news

Popular Stories

error: Content is protected !!