ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು ಗೊತ್ತೆ ?

ಬೆಂಗಳೂರು: ಇಪ್ಪತ್ತೈದು ವರ್ಷದ ಸಿನಿ ಪಯಣವನ್ನು ಅದ್ದೂರಿಯಾಗಿ ಆಚರಿಸಿಕೊಂಡಿರುವ ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದು, ಯಾವ ಭಾಷೆಯ ಚಿತ್ರದಲ್ಲಿ ಅಭಿನಯಿಸಲಿದ್ದಾರೆ, ಯಾರ ಜೊತೆ ಚಿತ್ರ ಮಾಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
ವಿಕ್ರಾಂತ್ ರೋಣ ಬಳಿಕ ಸುದೀಪ್ ಮತ್ತೆ ನಿರ್ದೇಶಕ ಅನೂಪ್ ಭಂಡಾರಿ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಅಲ್ಲದೆ ಹೊಸಬರ ಜೊತೆ ಸಿನಿಮಾ ಮಾಡುತ್ತಾರಾ ಅಥವಾ ತಾವೇ ನಿರ್ದೇಶನಕ್ಕೆ ಇಳಿಯುತ್ತಾರಾ ಎನ್ನುವ ಬಗ್ಗೆಯೂ ಅಭಿಮಾನಿಗಳ ಕುತೂಹಲ ಹೆಚ್ಚಾಗಿದೆ. ಈ ನಡುವೆ ಸುದೀಪ್ ಮಲಯಾಳಂ ಚಿತ್ರರಂಗಕ್ಕೂ ಎಂಟ್ರಿ ಕೊಡುತ್ತಿದ್ದಾರೆ. ಮೊದಲ ಬಾರಿಗೆ ಮಲಯಾಳಂ ಸಿನಿಮಾ ಮಾಡುತ್ತಿರುವ ಬಗ್ಗೆ ಸುದೀಪ್ ಇತ್ತೀಚಿಗಷೆÉ್ಟ ಬಹಿರಂಗ ಪಡಿಸಿದ್ದರು.
ಈಗಾಗಲೇ ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿ ಇದೆ ಎಂದು ಹೇಳಲಾಗುತ್ತಿದೆ. ಕೋಟಿಗೊಬ್ಬ-3 ಸಿನಿಮಾ ಕೂಡ ರಿಲೀಸ್ ಗೆ ರೆಡಿಯಾಗಿದ್ದು, ಏಪ್ರಿಲ್ ತಿಂಗಳಲ್ಲಿ ತೆರೆಗೆ ಬರುತ್ತಿದೆ. ಈ ಸಿನಿಮಾಗಳ ಜೊತೆಗೆ ಸುದೀಪ್, ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜ ಸಿನಿಮಾದಲ್ಲೂ ನಟಿಸಿದ್ದು, ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕ್ರಾಂತ್ ರೋಣ ಬಳಿಕ ಸುದೀಪ್ ಮುಂದಿನ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಹೊಸ ಸಿನಿಮಾಗೆ ಸಹಿ ಮಾಡುವ ಮೊದಲು ಸುದೀಪ್ ಸಂಪೂರ್ಣ ಗಮನ 8ನೇ ಬಿಗ್ ಬಾಸ್ ರಿಯಾಲಿಟಿ ಶೋ ಕಡೆ ಇರಲಿದ್ದು, ಪೆÇ್ರೀಮೋ ಕೂಡ ರಿಲೀಸ್ ಆಗಿದೆ.

Latest Indian news

Popular Stories