ಹಾಸ್ಯ ನಟಿ ಭಾರತಿ ಸಿಂಗ್ ಮುಂಬೈ ಮನೆಯ ಮೇಲೆ ಎನ್ ಸಿ ಬಿ ದಾಳಿ

ಮುಂಬೈ, ನ 21(ಯುಎನ್‍ಐ):- ಹಾಸ್ಯನಟಿ ಭಾರತಿ ಸಿಂಗ್ ಅವರ ನಿವಾಸದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‍ಸಿಬಿ) ಅಧಿಕಾರಿಗಳು ಶನಿವಾರ ದಾಳಿ ಮಾಡಿ ಶೋಧನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿಮಾಡಿವೆ.
ನಟಿ ಭಾರತಿ ಹಾಗೂ ಅವರ ಪತಿ ಮಾದಕ ಪದಾರ್ಥ ಸೇವಿಸುತ್ತಾರೆ ಎಂಬ ನಿಖರ ಮಾಹಿತಿ ದೊರೆತಿದೆ ಎಂದು ಎನ್‍ಸಿಬಿ ಮೂಲಗಳು ತಿಳಿಸಿವೆ.
ಮಾದಕ ಪದಾರ್ಥಗಳಿಗೆ ಸಂಬಂಧಿಸಿದಂತೆ ಎನ್ ಸಿಬಿ ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಪ್ರಸಿದ್ದ ವ್ಯಕ್ತಿಗಳ ಮನೆಗಳಲ್ಲಿ ಸರಣಿ ಶೋಧ ನಡೆಸುತ್ತಿದೆ. ಈ ತಿಂಗಳ ಆರಂಭದಲ್ಲಿ ಎನ್ ಸಿ ಬಿ ನಟ ಅರ್ಜುನ್ ರಾಂಪಾಲ್, ನಿರ್ಮಾಪಕ ಫಿರೋಜ್ ನಾಡಿಯಾವಾಲಾ ಅವರ ಮನೆಗಳ ಮೇಲೆ ದಾಳಿ ನಡೆಸಿತ್ತು. ಜಾರಿ ನಿರ್ದೇಶನಾಲಯ (ಇಡಿ) ನೀಡಿದ ಮಾಹಿತಿಯಂತೆ ಡ್ರಗ್ಸ್ ಬಳಸುತ್ತಿರುವ ಬಾಲಿವುಡ್ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಎನ್ ಸಿಬಿ ದಾಳಿ ನಡೆಸುತ್ತಿದೆ. ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡ ನಂತರ ಬಾಲಿವುಡ್‍ನಲ್ಲಿ ಡ್ರಗ್ ಮಾಫಿಯಾ ಹಗರಣ ಸ್ಫೋಟಗೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಅವರನ್ನು ಸೆಪ್ಟೆಂಬರ್ 9 ರಂದು ಎನ್‍ಸಿಬಿ ಬಂಧಿಸಿತ್ತು.

Latest Indian news

Popular Stories