ಪಂಜಾಬ್ ನಲ್ಲಿ ಇಂದಿನಿಂದ ಜ.15 ರ ವರೆಗೆ ನೈಟ್ ಕರ್ಫ್ಯೂ ಜಾರಿ

ಚಂಡೀಗಢ :ಕೋವಿಡ್ಮ ಜಗತ್ತಿನಾದ್ಯಂತ ಆತಂಕ ಸೃಷ್ಟಿಸುವ ಮಟ್ಟಕ್ಕೆ ತಲುಪುತ್ತಿದೆ. ಪಂಜಾಬ್‌ ಕೂಡ ಇದೇ ಪರಿಸ್ಥಿತಿ ಎದುರಿಸುತ್ತಿದ್ದು, ರಾತ್ರಿ ವೇಳೆ ಕರ್ಫ್ಯೂ ವಿಧಿಸಲು ಮುಂದಾಗಿದೆ.

ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಇಂದಿನಿಂದ ಜನವರಿ 15 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪಂಜಾಬ್‌ನ ಎಲ್ಲಾ ನಗರಗಳು ಮತ್ತು ಪಟ್ಟಣಗಳ ಪುರಸಭೆಯ ವ್ಯಾಪ್ತಿಯಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಅನಗತ್ಯ ಚಟುವಟಿಕೆಗಳಿಗೆ ಬ್ರೇಕ್‌ ಹಾಕಿದೆ.

ಎಲ್ಲಾ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ಗಳು, ಈಜುಕೊಳಗಳು, ಜಿಮ್‌ಗಳು ಮುಚ್ಚಲ್ಪಟ್ಟಿರುತ್ತವೆ. ಬಾರ್‌ಗಳು, ಸಿನಿಮಾ ಹಾಲ್‌ಗಳು, ಮಲ್ಟಿಪ್ಲೆಕ್ಸ್‌ಗಳು, ಮಾಲ್‌ಗಳು, ರೆಸ್ಟೋರೆಂಟ್‌ಗಳು, ಸ್ಪಾಗಳು, ಮ್ಯೂಸಿಯಂಗಳು, ಮೃಗಾಲಯಗಳು ಶೇ. 50 ರಷ್ಟು ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಎಸಿ ಬಸ್‌ಗಳು ಶೇ. 50 ರಷ್ಟು ಕಾರ್ಯನಿರ್ವಹಿಸಲಿವೆ.

ಲಸಿಕೆ ಹಾಕಿಸಿಕೊಂಡಿರುವ ಸರ್ಕಾರಿ ಮತ್ತು ಖಾಸಗಿ ಸಿಬ್ಬಂದಿಗಳಿಗೆ ಮಾತ್ರ ಕಚೇರಿಗೆ ಹೋಗುವ ಹಾಜರಾಗಲು ಅವಕಾಶ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Latest Indian news

Popular Stories