ಯಶಸ್ವಿಯಾಗಿ ಮತದಾರರಲ್ಲಿ ಜಾಗೃತಿ: ಜಿ.ಪಂ.ಸಿಇಒ ರಾಹುಲ್ ಸಿಂಧೆ ರಾಜ್ಯ ಪ್ರಶಸ್ತಿಗೆ ಆಯ್ಕೆ

ವಿಜಯಪುರ: ಜಿಲ್ಲೆಯ ಮತದಾರರಲ್ಲಿ ಯಶಸ್ವಿಯಾಗಿ ಜಾಗೃತಿ ಮೂಡಿಸಲು ಉತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರನ್ನು ರಾಜ್ಯ ಚುನಾವಣಾ ಆಯೋಗ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಜಿಲ್ಲೆಯ ಮತದಾರರಲ್ಲಿ ಮತದಾನದ ಮಹತ್ವ, ಪ್ರತಿಯೊಬ್ಬ ಅರ್ಹ ಮತದಾರ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಲು ನಿರಂತರವಾಗಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವಿಕೆ, ನಗರದಲ್ಲಿ ಎರಡು ಸಾವಿರಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನೊಳಗೊಂಡ ಕಾಲ್ನಡಿಗೆ ಜಾಥಾ, ಮತದಾರರಲ್ಲಿ ಅರಿವು, ತಿಳಿವಳಿಕೆ ಮೂಡಿಸಲು ವಿವಿಧ ಪ್ರಚಾರ ಸಾಮಗ್ರಿಗಳನ್ನು ವಿತರಿಸುವುದೂ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿಕೊಳ್ಳಲು ಹಾಗೂ ಮತದಾನದ ಮಹತ್ವ ಕುರಿತು ಯಶಸ್ವಿಯಾಗಿ ಕಾರ್ಯನಿರ್ವಹಿಸಿರುವುದನ್ನು ರಾಜ್ಯ ಚುನಾವಣಾ ಆಯೋಗ ಈ ಉತ್ತಮ ಕಾರ್ಯವನ್ನು ಪರಿಗಣಿಸಿ, ರಾಜ್ಯಮಟ್ಟದ ಪ್ರಶಸ್ತಿಗೆ ರಾಹುಲ್ ಶಿಂಧೆ ಅವರನ್ನು ಆಯ್ಕೆ ಮಾಡಲಾಗಿದೆ.

ಜ.25ರಂದು ಆಚರಿಸಲಾಗುವ 13ನೇ ರಾಷ್ಟ್ರಿಯ ಮತದಾರರ ದಿನಾಚರಣೆಯಲ್ಲಿ ಬೆಂಗಳೂರಿನ ರಾಜ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕದ ರಾಜ್ಯಪಾಲರು ರಾಹುಲ್ ಶಿಂಧೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಜಿಲ್ಲೆಯ ಮತದಾರರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಅಧಿಕಾರಿಗಳು, ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳು, ಮಾಧ್ಯಮದವರು ಹಾಗೂ ಸಾರ್ವಜನಿಕರು ಸಕ್ರೀಯವಾಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕೈ ಜೋಡಿಸಿದ್ದರಿಂದ ಉತ್ತಮ ಕಾರ್ಯನಿರ್ವಹಿಸಲು ಸಾಧ್ಯವಾಗಿ ಯಶಸ್ಸು ಸಾಧಿಸಿದ್ದು, ಈ ಪ್ರಶಸ್ತಿ ಲಭಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Latest Indian news

Popular Stories