ರಾಜ್ಯದಲ್ಲಿ ಕಾಳ್ಗಿಚ್ಚಿನಂತೆ ಹರಡುತ್ತಿದೆ ಕೊರೋನಾ: ಇಂದು ಬೆಂಗಳೂರಿನಲ್ಲಿ 6812 ಸೇರಿ 8449 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಕಾಳ್ಗಿಚ್ಚಿನಂತೆ ಹರಡುತ್ತಿದ್ದು, ಕಳೆದ 24 ಗಂಟೆಯಲ್ಲಿ 8449 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 30,31 052ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಪಾಸಿಟಿವ್ ಪ್ರಮಾಣ ಶೇ. 4.15ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38362ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದು 6812 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1283186ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು 107 ಹೊಸ ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಕೋವಿಡ್-19 ಹೊಸ ರೂಪಾಂತರಿ ಪ್ರಕರಣಗಳ ಸಂಖ್ಯೆ 333ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 505 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,62,548ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರೀಯ ಪ್ರಕರಣಗಳ ಸಂಖ್ಯೆ 30113ಕ್ಕೆ ಏರಿಕೆಯಾಗಿದೆ.

Latest Indian news

Popular Stories