ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು – ಪ್ರಯಾಣಿಕರು ಪಾರು

ಬೆಂಗಳೂರು: ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ಘಟನೆ ಮುಂಜಾನೆ 3.50ರ ಸಮಯದಲ್ಲಿ ನಡೆದಿದೆ.

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ ಸಂಚರಿಸುವಾಗ ಏಕಾಏಕಿ ಕಲ್ಲುಬಂಡೆ ಉರುಳಿಬಿದ್ದ ಪರಿಣಾಮ ರೈಲಿನ 5 ಬೋಗಿಗಳು ಹಳಿ ತಪ್ಪಿವೆ. ಸದ್ಯ ರೈಲಿನ ವೇಗ ಹೆಚ್ಚು ಇರಲಿಲ್ಲ. ಹೀಗಾಗಿ ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅಪಘಾತದ ಬಳಿಕ ರೈಲಿನಲ್ಲಿದ್ದ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿದೆ. ಇಂದು ಮುಂಜಾನೆ 3.50ರ ಸುಮಾರಿಗೆ ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿವೆ ಎಂದು ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ಹೇಳಿಕೆ ನೀಡಿದೆ.

ಬೆಂಗಳೂರು ವಿಭಾಗದ ತೊಪ್ಪೂರು-ಶಿವಡಿ ಮಾರ್ಗವಾಗಿ ರೈಲು ಹಾದು ಹೋಗುತ್ತಿದ್ದಾಗ ಏಕಾಏಕಿ ಬಂಡೆಗಳು ಬೀಳಲಾರಂಭಿಸಿವೆ. ಇದರಿಂದಾಗಿ ರೈಲು ಹಳಿ ತಪ್ಪಿದೆ. ಆದರೆ, ರೈಲಿನಲ್ಲಿದ್ದ ಎಲ್ಲಾ 2348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಬಗ್ಗೆ ವರದಿಯಾಗಿಲ್ಲ.

ರೈಲಿನಲ್ಲಿದ್ದ ಎಲ್ಲಾ 2,348 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ ರೈಲು ಹಳಿ ತಪ್ಪಿದ್ದು, ಯಾವುದೇ ಅನಾಹುತವಾಗಿಲ್ಲ.

Latest Indian news

Popular Stories