ವಿಜಯಪುರ: ಯುವತಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಎಸ್.ಪಿ ಎಚ್.ಡಿ.ಆನಂದ ಕುಮಾರ್ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯನ್ನು ಪುಸಲಾಯಿಸಿ ಮೂರು ಯುವಕರು ಕರೆದುಕೊಂಡು ಹೋಗಿ ಓರ್ವ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದರು.
ಅಯಾಜ್ ಅಹಮ್ಮದ್ ಜಮಾದಾರ, ಉಮರ್ ಪಾರೂಕ್ ಹಾಗೂ ರಾಹಿಲ್ ಬಂಧಿತ ಆರೋಪಿಗಳು. ಜನವರಿ.17ರಂದು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಯುವತಿ ಕಾಯುತ್ತಿದ್ದಳು. ಈ ವೇಳೆ ಆರೋಪಿಗಳು ಯುವತಿಯನ್ನು ಪುಸಲಾಯಿಸಿ ಅವರ ಬೈಕ್ ನಲ್ಲಿ ಯುವತಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸರು ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ ಆಧರಿಸಿ ಆರೋಪಿಗಳ ಪತ್ತೆಗೆ ಜಾಲ ಬೀಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.