ಅದಾನಿ ಸಮೂಹದ ಬಗ್ಗೆ ಹಿಂಡನ್ ಬರ್ಗ್ ವರದಿ ತನಿಖೆ: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ಅರ್ಜಿ ವಿಚಾರಣೆ

ನವದೆಹಲಿ: ಅದಾನಿ ಸಮೂಹದ ಸಂಸ್ಥೆಗಳ ಬಗ್ಗೆ ಹಿಂಡನ್ಬರ್ಗ್ ಸಂಶೋಧನಾ ವರದಿ ಕುರಿತು ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಾಳೆ ಕೈಗೆತ್ತಿಕೊಳ್ಳುವುದಕ್ಕೆ ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ. 

ಅಡ್ವೊಕೇಟ್ ವಿಶಾಲ್ ತಿವಾರಿ, ಈ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇದೇ ವಿಷಯವಾಗಿ ಸಲ್ಲಿಸಲಾಗಿರುವ ಪ್ರತ್ಯೇಕ ಅರ್ಜಿ ಶುಕ್ರವಾರ (ಫೆ.10) ರಂದು ವಿಚಾರಣೆಗೆ ಬರಲಿದೆ ಎಂದು ನ್ಯಾ. ಪಿಎಸ್ ನರಸಿಂಹ ಹಾಗೂ ಜೆ ಪಿ ಪರ್ದಿವಾಲ ಅವರಿದ್ದ ಪೀಠಕ್ಕೆ ತಿವಾರಿ ಹೇಳಿದ್ದು,  ಮತ್ತೊಂದು ಅರ್ಜಿಯ ಜೊತೆ ಜೊತೆಗೇ ತಮ್ಮ ಅರ್ಜಿಯ ವಿಚಾರಣೆಯನ್ನೂ ನಡೆಸುವುದಕ್ಕೆ ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

ಸಿಜೆಐ ಇದಕ್ಕೆ ಅನುಮತಿ ನೀಡಿದ್ದಾರೆ. ಇದಷ್ಟೇ ಅಲ್ಲದೇ ದೊಡ್ಡ ದೊಡ್ಡ ಕಾರ್ಪೊರೇಟ್ ಗಳಿಗೆ 500 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಲೋನ್ ನೀಡುವುದಕ್ಕೆ ಸಂಬಂಧಿಸಿದಂತೆ ಅನುಮೋದನೆ ನೀತಿಯನ್ನು ಪರಿಶೀಲಿಸಲು ಪ್ರತ್ಯೇಕ ಸಮಿತಿ ರಚನೆಗೂ ತಿವಾರಿ ಆಗ್ರಹಿಸಿದ್ದಾರೆ.

Latest Indian news

Popular Stories