ಅನಂತ್’ನಾಗ್ ಇಂದು ಬಿಜೆಪಿ ಸೇರ್ಪಡೆ

ಬೆಂಗಳೂರು: ಹಿರಿಯ ಚಲನಚಿತ್ರ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಇಂದು (ಫೆಬ್ರವರಿ 22) ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಂಜೆ 4.30ಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​​ನಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

Latest Indian news

Popular Stories