ನವದೆಹಲಿ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಬಾಗಿಲಿನ ಎರಡು ಗಾಜುಗಳು ಒಡೆದಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಒಡೆದ ಗಾಜುಗಳ ಸುತ್ತಮುತ್ತ ಯಾವುದೇ ಕಲ್ಲು ಅಥವಾ ಇನ್ನಾವುದೇ ವಸ್ತು ಪತ್ತೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಪ್ರದೇಶವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು.
ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿರುವ ತನ್ನ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಓವೈಸಿ ಆರೋಪಿಸಿದ್ದರು ಮತ್ತು 2014 ರಿಂದ ಇದು ನಾಲ್ಕನೇ ಘಟನೆಯಾಗಿದೆ.