ಧುಬ್ರಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ಬಾಲಕಿಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇತರ ಐವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರೊಂದು ಟ್ರಕ್ ಮತ್ತು ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಮೋಟಾರು ಸೈಕಲ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೃತರನ್ನು 16 ವರ್ಷದ ನಿರ್ಮಲಿ ರೈ ಮತ್ತು ಶಿವಂಗಿ ರೈ (14) ಎಂದು ಗುರುತಿಸಲಾಗಿದೆ. ಘಟನೆ ನಡೆದ ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಹಾನಿಯಾದ ವಾಹನದಿಂದ ಹೊರಗೆ ತೆಗೆದು ಧುಬ್ರಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಕಾರಿನ ಚಾಲಕ ವೈದ್ಯನಾಗಿದ್ದು, ಕುಡಿದ ಮತ್ತಿನಲ್ಲಿಅಪಘಾತ ಮಾಡಿರುವುದಾಗಿ ಸ್ಥಳೀಯರು ಹೇಳಿದ್ದಾರೆ. ಬಳಿಕ ಆ ವೈದ್ಯನನ್ನು ಬಂಧಿಸಲಾಗಿದ್ದು, ಹಿಟ್ ಅಂಡ್ ರನ್ ಪ್ರಕರಣ ದಾಖಲಿಸಲಾಗಿದೆ.