ಇಂಗ್ಲೆಂಡ್ ಪ್ರಧಾನಿ ಬೊರಿಸ್ ಜಾನ್ಸನ್ ಎರಡು ದಿನಗಳ ಭಾರತ ಭೇಟಿ: ಗುಜರಾತ್ ನ ಅಹ್ಮದಾಬಾದ್ ಗೆ ಆಗಮನ

0
417

ನವದೆಹಲಿ/ಲಂಡನ್: ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್(UK PM Boris Johnson) ಎರಡು ದಿನಗಳ ಭಾರತ ಭೇಟಿಗೆ ಗುಜರಾತ್ ನ ಅಹ್ಮದಾಬಾದ್ ಗೆ ಆಗಮಿಸಿದ್ದಾರೆ.

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಎರಡು ದಿನಗಳ ಭೇಟಿಯು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಹೊಸ ಉತ್ತೇಜನವನ್ನು ನೀಡಲಿದೆ. ಇಂಡೋ-ಪೆಸಿಫಿಕ್‌ನಲ್ಲಿ ಸಹಕಾರವನ್ನು ಹೆಚ್ಚಿಸುವುದು, ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವ ಉಭಯ ದೇಶಗಳು ಚರ್ಚೆ ನಡೆಸುವ ಸಾಧ್ಯತೆಯಿದೆ. ಬೊರಿಸ್ ಜಾನ್ಸನ್ ಅವರು ದೆಹಲಿಯಲ್ಲಿ ರಷ್ಯಾ ಮೇಲೆ ಉಕ್ರೇನ್ ದಾಳಿಗೆ ಯಾವ ರೀತಿ ಪ್ರತಿಕ್ರಿಯಿಸಬೇಕೆಂದು ಉಪನ್ಯಾಸ ನೀಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗಿನ(PM Narendra Modi) ಜಾನ್ಸನ್ ಅವರ ಮಾತುಕತೆಯ ಪ್ರಮುಖ ಅಂಶವು ಇಂಡೋ-ಪೆಸಿಫಿಕ್‌ನಲ್ಲಿನ ಪರಿಸ್ಥಿತಿಯ ಮೇಲೆ ಇರುತ್ತದೆ, ಈ ಪ್ರದೇಶದಲ್ಲಿ ಯಾವುದೇ ರೀತಿಯ ದಬ್ಬಾಳಿಕೆಯನ್ನು ಇಂಗ್ಲೆಂಡ್ ಪ್ರಬಲವಾಗಿ ವಿರೋಧಿಸುತ್ತದೆ. ಭಾರತವನ್ನು ರಕ್ಷಣಾ ಉತ್ಪಾದನೆಯ ಕೇಂದ್ರವನ್ನಾಗಿ ಮಾಡುವ ಮೋದಿಯವರ ದೃಷ್ಟಿಯನ್ನು ಸಾಕಾರಗೊಳಿಸಲು ಯುಕೆ ತನ್ನ ಸಹಕಾರವನ್ನು ವಿಸ್ತರಿಸಲು ಸಿದ್ಧವಾಗಿದೆ. ಮಿಲಿಟರಿ ಯಂತ್ರಾಂಶದ ಜಂಟಿ ಉತ್ಪಾದನೆಗೆ ತಂತ್ರಜ್ಞಾನಗಳ ವರ್ಗಾವಣೆಗೆ ದೇಶವು ಸಿದ್ಧವಾಗಿದೆ.

ಭಾರತ-ಇಂಗ್ಲೆಂಡ್ ಮುಕ್ತ ವ್ಯಾಪಾರ ಒಪ್ಪಂದದ ಕುರಿತು, ಜಾನ್ಸನ್ ಅವರ ಭೇಟಿಯು ಮುಂದಿನ ವಾರ ನಡೆಯಲಿರುವ ಮುಂದಿನ ಸುತ್ತಿನ ಮಾತುಕತೆಗಳಿಗೆ ವೇದಿಕೆಯಾಗಿದೆ ಎಂದು ಭೇಟಿಯ ಬೆಳವಣಿಗೆ ಬಗ್ಗೆ ಮಾಹಿತಿ ಇರುವವರು ತಿಳಿಸಿದ್ದಾರೆ.

ಇಂಗ್ಲೆಂಡ್ -ಭಾರತ ಪ್ರಧಾನಿ ಮಾತುಕತೆ: ಇಂದು ದಿನವಿಡೀ ಗುಜರಾತ್ ನಲ್ಲಿ ಕಾರ್ಯಕ್ರಮ ನಂತರ ಸಂಜೆ ದೆಹಲಿಗೆ ತೆರಳಲಿದ್ದಾರೆ. ಇಂಗ್ಲೆಂಡ್ ಪ್ರಧಾನಿ ಜಾನ್ಸನ್ ಮತ್ತು ಪ್ರಧಾನ ಮಂತ್ರಿ ಮೋದಿ ನಾಳೆ ಶುಕ್ರವಾರ ದೆಹಲಿಯಲ್ಲಿ ವ್ಯಾಪಕ ಮಾತುಕತೆ ನಡೆಸಲಿದ್ದಾರೆ.

ಮೋದಿ ಮತ್ತು ಜಾನ್ಸನ್ ನಡುವಿನ ಮಾತುಕತೆಗಳು ಉಭಯ ದೇಶಗಳ ನಡುವಿನ ಮಹತ್ವಾಕಾಂಕ್ಷೆಯ ಮುಕ್ತ ವ್ಯಾಪಾರ ಒಪ್ಪಂದಕ್ಕಾಗಿ ಉಭಯ ಪಕ್ಷಗಳ ಮಾತುಕತೆಗಳನ್ನು ಮತ್ತಷ್ಟು ಉತ್ತೇಜಿಸುವ ನಿರೀಕ್ಷೆಯಿದೆ ಎಂದು ಜನರು ಹೇಳಿದ್ದಾರೆ. ಈ ವರ್ಷಾಂತ್ಯದೊಳಗೆ ಮಾತುಕತೆ ಮುಗಿಸಲು ಎರಡೂ ಕಡೆಯವರು ಪ್ರಯತ್ನ ನಡೆಸುತ್ತಿದ್ದಾರೆ.

ಕಳೆದ ವರ್ಷ ಮೇ ತಿಂಗಳಲ್ಲಿ ಮೋದಿ ಮತ್ತು ಜಾನ್ಸನ್ ನಡುವೆ ನಡೆದ ಭಾರತ-ಯುಕೆ ವರ್ಚುವಲ್ ಶೃಂಗಸಭೆಯಲ್ಲಿ ಭಾರತ-ಯುಕೆ ಸಂಬಂಧವನ್ನು ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಗೆ ಏರಿಸಲಾಯಿತು. ಶೃಂಗಸಭೆಯಲ್ಲಿ, ವ್ಯಾಪಾರ ಮತ್ತು ಆರ್ಥಿಕತೆ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ ಮತ್ತು ಜನರ-ಜನರ ಸಂಪರ್ಕಗಳ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ವಿಸ್ತರಿಸಲು ಉಭಯ ಪಕ್ಷಗಳು 10 ವರ್ಷಗಳ ಮಾರ್ಗಸೂಚಿಯನ್ನು ಅಳವಡಿಸಿಕೊಂಡವು.

LEAVE A REPLY

Please enter your comment!
Please enter your name here