ಇಂದು ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ

ಬೆಂಗಳೂರಿಗೆ ಬಂದಿಳಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ

2024ರ ಲೋಕಸಭಾ ಚುನಾವಣೆಯಲ್ಲಿ(Lok Sabha Election 2024)ಬಿಜೆಪಿಗೆ ಟಕ್ಕರ್ ಕೊಡಲು ಕಾಂಗ್ರೆಸ್(Congress) ರಣತಂತ್ರ ಹೆಣೆಯುತ್ತಿದೆ.

ಈ ಬಗ್ಗೆ ಸಭೆ ನಡೆಸಲು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ವಿಪಕ್ಷಗಳ ಮಹಾ ಮೈತ್ರಿಕೂಟದ ಸಭೆ ಹಮ್ಮಿಕೊಳ್ಳಲಾಗಿದೆ.

ಬೆಳಗ್ಗೆ 11 ಗಂಟೆಗೆ ಸಭೆಯಲ್ಲಿ ಖರ್ಗೆ ಪ್ರಾಸ್ತಾವಿಕ ಭಾಷಣ ನಡೆಸಲಿದ್ದು ಬೆಳಗ್ಗೆ 11.10ರಿಂದ 6 ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ತ್ರಿಕೂಟ ಸಭೆಯ ನಿರ್ಣಯ ಬಗ್ಗೆ ಘೋಷಣೆ ಮಾಡಲಿದ್ದಾರೆ. 

Latest Indian news

Popular Stories