ವಿರಾಜಪೇಟೆ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಸೃಷ್ಟಿಯಾದ ಸಮಸ್ಯೆಗಳನ್ನು ಬಗೆಹರಿಸಲು ಕನಿಷ್ಠ 20 ತಿಂಗಳು ಅವಕಾಶ ನೀಡಿ.ಈಗ ತಾವು ಶಾಸಕರಾಗಿ ಮೂರು ತಿಂಗಳು ಆಗಿದೆ.ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿರುವ ಎ.ಎಸ್.ಪೊನ್ನಣ್ಣ ನವರು ಜನತೆಯಲ್ಲಿ ಮನವಿ ಮಾಡಿದರು.
ವಿರಾಜಪೇಟೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ನಡೆದ ಅಹವಾಲು ಸಂವಾದ ಕಾರ್ಯಕ್ರಮ ನಡೆಸಿದ ಅವರು ಕಾರ್ಯಕರ್ತರು ಗಮನ ಸೆಳೆದ ಕ್ಷೇತ್ರದ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಭರವಸೆ ನೀಡಿದರು.ಸರ್ಕಾರ ಜನಪರ ಕಾರ್ಯಕ್ರಮ ಜಾರಿಗೆ ತಂದಿದ್ದು ಅದನ್ನು ಕ್ಷೇತ್ರದ ಕಟ್ಟ ಕಡೆಯ ಪ್ರಜೆಗೆ ತಲುಪಿಸುವ ಹೊಣೆಗಾರಿಕೆಯನ್ನು ನಿಭಾಯಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸ್ ರಾಜ್ ರವರು ಮಾತನಾಡಿ ಈಗಾಗಲೇ ಜಿಲ್ಲಾ ಮಟ್ಟದಲ್ಲಿ ಕೆಡಿಪಿ ಸಭೆ ನಡೆಸಿದ್ದು ತಾಲ್ಲೂಕು ಮಟ್ಟದ ಸಭೆ ಆರಂಭಗೊಂಡಿದೆ.ಮುಂದೆ ಹೋಬಳಿ ಮಟ್ಟದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗುವುದು ಹಾಗೂ ಈ ಸಭೆಗಳಲ್ಲಿ ತಾವು ,ಶಾಸಕರು,
ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಹಿರಿಯ ,ಕಿರಿಯ ಅಧಿಕಾರಿಗಳು ಭಾಗಿಯಾಗಿ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ವೀಣಾ ಅಚ್ಚಯ್ಯ ನವರು ಮಾತನಾಡಿ ಪೊನ್ನಣ್ಣ ನವರು ಶಾಸಕರಾದ ನಂತರ ಪ್ರತಿ ದಿನ ಕ್ಷೇತ್ರದ್ಯಾದಂತ 500 ಕಿ.ಮೀ ಗಿಂತಲೂ ಹೆಚ್ಚು ದೂರ ಸಂಚರಿಸಿ ಜನರನ್ನು ಸಂಪರ್ಕಿಸಿ ಅವರಿಗೆ ನೆರವಾಗುತ್ತಿದ್ದು ಅವರ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚನವರ ಅಧ್ಯಕ್ಷತೆಯಲ್ಲಿ ಬಿಟ್ಟಂಗಾಲದ ಹೆಗ್ಡೆ ಸಮಾಜದ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಡಿ.ಸಿ.ಸಿ. ಪಧಾಧಿಕಾರಿಗಳು,ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು ಸೇರಿದಂತೆ ಕ್ಷೇತ್ರದ ಕಾರ್ಯಕರ್ತರು ಭಾಗಿಯಾಗಿದ್ದರು.