ಈಗ ಲಾಕ್’ಡೌನ್ ಮಾಡುವುದು ಸರಿಯಲ್ಲ – ಸಚಿವ ಡಾ.ಸುಧಾಕರ್

ಬೆಂಗಳೂರು: ಕೋವಿಡ್-19 ಮೂರನೇ ಅಲೆ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಈಗಾಗಲೇ ಸರಕಾರ ಕೋವಿಡ್ ನಿಯಮಾವಳಿಯನ್ನು ರಾಜ್ಯದಲ್ಲಿ ಜಾರಿಗೆ ತಂದಿದೆ.

ಈ ಕುರಿತು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಸುಧಾಕರ್, ಕೋವಿಡ್ ಸೋಂಕು ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಸರಕಾರ ಕಠಿಣ ನಿಯಮಗಳಿಂದ ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಈ ಸಮಯದಲ್ಲಿ ಲಾಕ್’ಡೌನ್ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕೋರೊನಾ ಸೋಂಕು ಪ್ರಕರಣ ಹೆಚ್ಚಿರುವ ಜಿಲ್ಲಾಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಿದ್ದಾರೆ. ಅದರೊಂದಿಗೆ ಜನರು ಸೋಂಕು ನಿಯಂತ್ರಿಸಲು ಸಹಕರಿಸಬೇಕೆಂದು ವಿನಂತಿಸಿದ್ದಾರೆ.

Latest Indian news

Popular Stories

error: Content is protected !!