ಉಡುಪಿ: ಜಿಲ್ಲೆಯ ಹಲವು ಪ್ರದೇಶದಲ್ಲಿ ಗುರುವಾರ ರಾತ್ರಿ ಉತ್ತಮ ಮಳೆಯಾಗಿದೆ. ಗುಡುಗು-ಮಿಂಚು ಸಹಿತ ಮಳೆಯಾಗಿದ್ದು ಬಿಸಿಲ ಬೇಗೆಯಲ್ಲಿ ಬೇಯುತ್ತಿದ್ದ ಜನರಿಗೆ ಸ್ವಲ್ಪ ತಂಪೆರಗಿದೆ.
ಮೋಕಾ ಚಂಡಮಾರುತ ಇಂದು ಒಡಿಶಾಗೆ ಅಪ್ಪಳಿಸಲಿದ್ದು, ಅದರ ಪ್ರಭಾವ ಸಾಕಷ್ಟು ರಾಜ್ಯಗಳ ಮೇಲಾಗಲಿದೆ ಅದರಲ್ಲಿ ಕರ್ನಾಟಕ ಕೂಡ ಒಂದು. ಕರಾವಳಿಯ ಎಲ್ಲಾ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.