ಉಡುಪಿಯಲ್ಲಿ ಸಂಪೂರ್ಣ ನೆಲಕಚ್ಚಿದ್ದ ಕಾಂಗ್ರೆಸ್’ನ್ನು ಪುನರುಜ್ಜೀವನ ಮಾಡಿದ್ದು ನಾನು – ಪ್ರಮೋದ್ ಮಧ್ವರಾಜ್

ಉಡುಪಿ:ಸಿದ್ದರಾಮಯ್ಯ ವಿರುದ್ಧ ಪ್ರಮೋದ್ ಮಧ್ವರಾಜ್ ತೀವ್ರ ವಾಗ್ದಾಳಿ ನಡೆಸಿದ್ದು ಸಿದ್ದರಾಮಯ್ಯ ಈವರೆಗೆ ಏಳು ಬಾರಿ ಪಕ್ಷವನ್ನು ಬದಲಿಸಿದ್ದಾರೆ.ನಾನು ಹುಟ್ಟಿನಿಂದ ಕಾಂಗ್ರೆಸ್. ಈಗ ಬಿಜೆಪಿ ಸೇರಿದ್ದೇನೆ ಎಂದು ಅವರ ವಿರುದ್ಧ ಸಿದ್ದರಾಮಯ್ಯ, ಡಿಕೆಶಿ ನಡೆಸಿದ ಟೀಕೆಗೆ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ 1978 ರಲ್ಲಿ ರೈತಸಂಘದಲ್ಲಿದ್ದರು.1983 ರಲ್ಲಿ ಭಾರತೀಯ ಲೋಕದಳ, ಸಮಾಜಪಕ್ಷ ಜನತಾದಳ, ಜಾತ್ಯಾತೀತ ಜನತಾದಳ, ಅಹಿಂದ ಸೇರಿಕೊಂಡರು.
ಸಿದ್ದರಾಮಯ್ಯ ಅಶಿಸ್ತಿನ ವಾತಾವರಣ ಸೃಷ್ಟಿ ಮಾಡಿ ವಜಾವಾಗಿದ್ದರು.

ಬೇರೆ ಪಕ್ಷದಿಂದ ಕಾಂಗ್ರೆಸ್ ಗೆ ಬರಬೇಡಿ ಎಂದು ಘೋಷಿಸಿ
ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಪ್ರಮೋದ್ ಮಧ್ವರಾಜ್ ಸವಾಲು ಹಾಕಿದ್ದಾರೆ.ಸನ್ನಿವೇಶಕ್ಕೆ ಅನುಗುಣವಾಗಿ ದೇಶದಲ್ಲಿ ಪಕ್ಷಾಂತರ ಸಾಮಾನ್ಯ.ನನ್ನನ್ನು ಅಸಾಮಿ, ಗಿರಾಗಿ ಅಂತ ಹೇಳಿದ್ದಾರೆ.ನಾನು ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ ಮಂತ್ರಿಯಾಗಿದ್ದೆ.ಜನಸಾಮಾನ್ಯರ ಬಗ್ಗೆ ಸಿದ್ದರಾಮಯ್ಯ ಹೇಗೆ ಮಾತನಾಡಬಹುದು? ಎಂದು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ಕೆಟ್ಟ ಮಾತನಾಡಲು ಎಲ್ಲರಿಗೂ ಬರುತ್ತದೆ.ತಂದೆ ತಾಯಿ ನನಗೆ ಸಂಸ್ಕಾರ ಸೌಜನ್ಯತೆ ಕಲಿಸಿದ್ದಾರೆ.ಉಡುಪಿ ಚಿಕ್ಕಮಗಳೂರು, ಉ.ಕನ್ನಡ ಮೈತ್ರಿ ಸೀಟ್ ಆಗಿತ್ತು.ಸಿದ್ದರಾಮಯ್ಯ ಮೈಸೂರು ಕ್ಷೇತ್ರ ಉಳಿಸಲು ಸ್ವಾರ್ಥ ಸಾಧನೆ ಮಾಡಿದರು.ಜೆಡಿಎಸ್ ನಲ್ಲಿ ಟಿಕೆಟ್ ಪಡೆಯೋ ಮೊದಲು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಪರವಾನಿಗೆ ಪಡೆದಿದ್ದೇನೆ.ಸಿದ್ದರಾಮಯ್ಯ ಅವರ ಸುಳ್ಳಿನ ಬಗ್ಗೆ ಆಕ್ಷೇಪ ಇದೆ ಖಂಡಿಸುತ್ತೇನೆ ಎಂದರು.

ಜೆಡಿಎಸ್ ನಿಂದ ಹಣ ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ.ಜೆಡಿಎಸ್ ನಿಂದ ಬಂದ ಫಂಡನ್ನು ಜಿಲ್ಲಾ ಕಾಂಗ್ರೆಸ್ ಪಡೆದಿದೆ ಎಲ್ಲಾ ಹಂಚಿಕೆ ಮಾಡಿದ್ದೇನೆ ಎಂದು ಉಡುಪಿಯಲ್ಲಿ ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಹೇಳಿಕೆ ನೀಡಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ಧ ಪ್ರಮೋದ್ ಮಧ್ವರಾಜ್ ವಾಗ್ದಾಳಿ:

ನನ್ನ ತಂದೆ ಸ್ವಂತ ಹಣದಿಂದ ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದಾರೆ.ಸಂಪೂರ್ಣ ನೆಲಕ್ಕಚ್ಚಿದ ಕಾಂಗ್ರೆಸ್ ನ್ನು ನಾನು ಪುನರುಜ್ಜೀವನ ಮಾಡಿದ್ದೆ.ಲಂಚದ ಹಣದಿಂದ ಇನ್ನೊಬ್ರ ಕಿಸೆಯಿಂದ ಕಿತ್ಕೊಂಡು ಪಕ್ಷ ಕಟ್ಟಿಲ್ಲ.ಸ್ವಜನ ಪಕ್ಷಪಾತ, ಲಂಚ ಪಡೆಯಲು ಪಕ್ಷವನ್ನು ಉಪಯೋಗಿಸಿಲ್ಲ ಎಂದು ಡಿಕೆ ಶಿವಕುಮಾರ್ ಮೇಲೆ ಗಂಭೀರ ಆರೋಪ ಮಾಡಿದರು.

ಎಸ್. ಎಂ ಕೆ ಪದ್ಮಭೂಷಣ ಪಡೆದಿದ್ದಾರೆ ನನ್ನ ಅಭಿನಂದನೆ ಇದೆ.ಡಿಕೆ ಎಸ್ ಎಂಕೆಯನ್ನು ಯಾಕೆ ಟೀಕಿಸಿಲ್ಲ?
ಕೃಷ್ಣ ಮೊಮ್ಮಗನಿಗೆ ಮಗಳನ್ನು ಕೊಟ್ಟಾಗ ಪಕ್ಷಾಂತರ ನೆನಪಾಗಿಲ್ವಾ? ಎಂದು ಪ್ರಶ್ನಿಸಿದರು.

2023 ರ ಚುನಾವಣೆ ಯಲ್ಲಿ ಬಿಜೆಪಿ ಐದಕ್ಕೈದು ಸ್ಥಾನ ಗೆಲ್ಲುತ್ತದೆ.ಬಿಜೆಪಿ ಸೋಲಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ. ಪ್ರಮೋದ್ ಜೊತೆ ಒಬ್ಬನೂ ಸೇರಿಲ್ಲ ಎಂದಿದ್ದಾರೆ.
ಸಂಘರ್ಷದ ಸಂದರ್ಭದಲ್ಲಿ ಸೇರ್ಪಡೆ ಮಾಡಿಲ್ಲ.
ಚುನಾವಣೆ ಹತ್ತಿರವಾಗುವವರೆಗೆ ಕಾಯಿರಿ
ಈಗಲೇ ಕಾರ್ಯಕರ್ತರಿಗೆ ಅಭಿನಂದನೆ ಕೊಡಬೇಡಿ ಎಂದ ಉಡುಪಿಯಲ್ಲಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

Latest Indian news

Popular Stories