ಉಡುಪಿ ಕಾಲೇಜು ಘಟನೆ: ಎಬಿವಿಪಿ ಪ್ರತಿಭಟನೆ

ಉಡುಪಿ: ಖಾಸಗಿ ಖಾಸಗಿ ಕಾಲೇಜೊಂದರಲ್ಲಿ ವಿಡಿಯೋ ಚಿತ್ರೀಕರಣ ಸಂಬಂಧಿಸಿದಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಅಜ್ಜರಕಾಡಿನ ಹುತಾತ್ಮರ ಸ್ಮಾರಕ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಬರಲೇಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರರವರು ಆಗಮಿಸಿ ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ, ಅವರ ಪ್ರಶ್ನೆಗಳಿಗೆ ಉತ್ತರ ನೀಡಿದರು.

Latest Indian news

Popular Stories