ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ – ಪ್ರಮೋದ್ ಮಧ್ವರಾಜ್

ತಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಸಮಯದಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್‌ ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಕಾಂಗ್ರೆಸ್‌ ಸರಕಾರದಲ್ಲಿ ಕ್ಯಾಬಿನೆಟ್‌ ಸಚಿವನಾಗಿ ಕೆಲಸ ಮಾಡಿದ್ದೇನೆ. ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚುನಾವಣೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದರು.

ಹಾಲಿ ಸಂಸದರು ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿ ಸುತ್ತಿಲ್ಲ ಎಂಬ ಆರೋಪದ ಬಗ್ಗೆ ನಾನು ಮಾತ ನಾಡುವುದಿಲ್ಲ. ಪ್ರವಾಸೋದ್ಯಮ ಅಭಿ ವೃದ್ಧಿಯಾದಲ್ಲಿ ಹಲವಾರು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಒತ್ತುವರಿ, ಕಸ್ತೂರಿ ರಂಗನ್‌ ವರದಿ ಜಾರಿ, ಹುಲಿ ಯೋಜನೆ, ಬಫರ್‌ ಝೋನ್‌, ಅಡಿಕೆ ಎಲೆಚುಕ್ಕಿ ರೋಗ ಮುಂತಾದವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಪ್ರಾಮಾಣಿಕ ವಾಗಿ ನಿಭಾಯಿಸಬಲ್ಲೆ ಎಂದರು.

Latest Indian news

Popular Stories