ಉಡುಪಿ, ದ.ಕ ದಲ್ಲಿ ಜುಲೈ 9 ರವರೆಗೆ ರೆಡ್ ಅಲರ್ಟ್: ಭಾರೀ ಮಳೆಯಾಗುವ ಸಾಧ್ಯತೆ

ಮಂಗಳೂರು, ಜು.7: ಕರ್ನಾಟಕದ ಕರಾವಳಿ ಭಾಗದಲ್ಲಿ ಗುರುವಾರ ಜುಲೈ 7 ರಂದು ಮಳೆಯ ಆರ್ಭಟ ಮುಂದುವರೆದಿದೆ. ಜುಲೈ 7 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು. ಈಗ ಜುಲೈ 8 ಮತ್ತು 9 ರವರೆಗೆ ವಿಸ್ತರಿಸಲಾಗಿದೆ.

ಮುಂದಿನ 48 ಗಂಟೆಗಳಲ್ಲಿ, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆಯೆಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ 204 ಮಿ.ಮೀ.ಗೂ ಹೆಚ್ಚು ಮಳೆ ಬೀಳುವ ನಿರೀಕ್ಷೆ ಇದೆ. ಜುಲೈ 10 ಮತ್ತು 11 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

IMD ನೀಡಿದ ಮುನ್ಸೂಚನೆಯ ಪ್ರಕಾರ ಈ ಸಮಯದಲ್ಲಿ ಸಮುದ್ರದಲ್ಲಿ ದೊಡ್ಡ ಅಲೆಗಳು ಏಳುವ ನಿರೀಕ್ಷೆಯಿದೆ. ಮೀನುಗಾರರು ಮತ್ತು ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಅವಧಿಯಲ್ಲಿ ಅತಿವೃಷ್ಟಿಯಿಂದ ಉಂಟಾಗಬಹುದಾದ ಪ್ರಕೃತಿ ವಿಕೋಪಗಳನ್ನು ನಿಭಾಯಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ 60 ಸದಸ್ಯರ ತಂಡ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳದ 67 ಸದಸ್ಯರ ತಂಡ ಸಿದ್ಧವಾಗಿದೆ.

Latest Indian news

Popular Stories