ಉಡುಪಿ: ಪಿ.ಎಫ್.ಐ ಬ್ಯಾನ್ ಮಾಡಿದಂತೆ ಭಯೋತ್ಪಾದಕರ ಬೇರು ಸಮೇತ ಕಿತ್ತು ಹಾಕುತ್ತೇವೆ – ಸಂಸದ ತೇಜಸ್ವಿ ಸೂರ್ಯ

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, “ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ಮಾಡಬೇಕು ಎಂಬೂದು ಕೆಲವರ ಉದ್ದೇಶವಾಗಿದೆ.ಆರ್ಥಿಕ ಶಕ್ತಿಕೇಂದ್ರದಲ್ಲಿ ಕೋಮುಗಲಭೆ ಸೃಷ್ಟಿಸುವ ಷಡ್ಯಂತ್ರ ನಡೆದಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಸರಣಿ ಕೊಲೆಗಳು ನಡೆದಿದ್ದವು.ರಾಜ್ಯವನ್ನು ಶಾಂತಿ ಸುವ್ಯವಸ್ಥೆ ಕೆಡಿಸುವ ಕೆಲಸ ನಡೆಯುತ್ತಿದೆ.ಪಿಎಫ್ ಐ ಬ್ಯಾನ್ ಮಾಡಿದಂತೆ ಭಯೋತ್ಪಾಧಕರ ಬೇರು ಸಮೇತ ಕಿತ್ತು ಹಾಕುತ್ತೇವೆ ಎಂದ ಅವರು ಅಲ್ಲಿಯ ತನಕಬನಮ್ಮ ಸರಕಾರಗಳು ವಿಶ್ರಮಿಸೊದಿಲ್ಲ ಎಂದರು.

ಈವರೆಗೆ ರಾಜ್ಯದಲ್ಲಿ ದೊಡ್ಡಮಟ್ಟದ ಚಟುವಟಿಕೆ ನಡೆದಿಲ್ಲ. ಈ ಒಂದು ಘಟನೆ ರಾಜ್ಯವನ್ನು ಎಚ್ಚರಿಸಲಿದೆ. ಕರಾವಳಿಯಲ್ಲೇ ಒಂದು ಎನ್ ಐ ಎ ಆಫೀಸ್ ಬೇಕಾಗಿದೆ. ಕರ್ನಾಟಕ ಕರಾವಳಿ ವಿಚ್ಛಿದ್ರ ಶಕ್ತಿಗಳ ಕೇಂದ್ರವಾಗುತ್ತಿದೆ.ಕರಾವಳಿಯಲ್ಲಿ ಎನ್ ಐ ಎ ಕ್ಯಾಂಪ್ ಆಫೀಸ್ ಸ್ಥಾಪನೆ ಮಾಡಬೇಕು ಎಂದರು.

ಈ ಹಿಂದೆಯೇ ಗೃಹ ಸಚಿವ ಅಮಿತ್ ಶಾ ಜೊತೆ ಮಾತನಾಡಿದ್ದೇನೆ. ಈ ಬಗ್ಗೆ ಮತ್ತೆ ಕೇಂದ್ರ ಸರಕಾರ ಜೊತೆ ಮಾತನಾಡುತ್ತೇನೆ.ಪೊಲೀಸ್- ಇಂಟೆಲಿಜನ್ಸ್ ಎನ್ ಐ ಎ ಜೊತೆಯಾಗಿ ಕೆಲಸ ಮಾಡಿದರೆ ಇಂತಹ ಘಟನೆ ತಡೆಗಟ್ಟಬಹುದು. ರಾಜ್ಯದ ಜನರ ಜೀವ ಮತ್ತು ವಸ್ತುಗಳ ಸಂರಕ್ಷಣೆ ನಮ್ಮ ಕರ್ತವ್ಯವಾಗಿದೆ. ನಾವು ಓಟ್ ಬ್ಯಾಂಕ್ ಗೆ ಮುಲಾಜು ಬಿದ್ದು ರಾಜಕೀಯ ಮಾಡಲ್ಲ.ರಾಷ್ಟ್ರೀಯ ರಾಜ್ಯದ ಸುರಕ್ಷತೆಗೆ ನಮ್ಮ ಆದ್ಯತೆಯಾಗಿದ್ದು ದೇಶದ ಸುರಕ್ಷತೆ ವಿಚಾರದಲ್ಲಿ ಕಾಂಪ್ರಮೈಸ್ ಮಾಡಲ್ಲ ಎಂದರು. ಬ್ಲ್ಯಾಸ್ಟ್ ಹಿಂದಿರುವವರನ್ನು ಕಾನೂನಾತ್ಮಕವಾಗಿ ಸಂಹಾರ ಮಾಡುತ್ತೇವೆ ಎಂದು ಹೇಳಿದರು.

Latest Indian news

Popular Stories