ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ನೀಡಿ ಆಶೀರ್ವಾದ ಪಡೆದರು.

ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು, ಅಲ್ಲಿಂದ ಸಹಸ್ರಾರು ಕಾರ್ಯಕರ್ತರೊಂದಿಗೆ ಉಡುಪಿ ತಾಲೂಕ ಕಚೇರಿಗೆ ಆಗಮಿಸಿ ಚುನಾವಣಾ ಅಧಿಕಾರಿ ಸೀತಾ ಅವರಿಗೆ ನಾಮಪತ್ರ ಸಲ್ಲಿಸಿದರು

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಹಣವರ ಕಾಲ್ ಮಾಡಿ ವೀಣಾ ನಾಯ್ಕ್, ರಿಧಿ ಮೊದಲಾದವರು ಉಪಸ್ಥಿತರಿದ್ದರು

Latest Indian news

Popular Stories