ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ ಭಾಷೆ ಮಾಡದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಕನ್ನಡ ಕಡ್ಡಾಯ ಮಾಡದಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿದೆ.

ನ್ಯಾ.ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ, “ಎನ್ಇಪಿ-2020 ರ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸುವ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ್ದು, ಮೇಲ್ನೋಟಕ್ಕೆ, ಎನ್ ಇಪಿ-2020ರ ಅಡಿಯಲ್ಲಿ ಉನ್ನತ ಶಿಕ್ಷಣಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ವಿಷಯದಲ್ಲಿ ಪರಿಗಣನೆಯ ಅಗತ್ಯವಿದೆ, ಮುಂದಿನ ಆದೇಶದ ವರೆಗೂ ಈ ಹಂತದಲ್ಲಿ ಸರ್ಕಾರ ಕನ್ನಡ ಕಡ್ಡಾಯಗೊಳಿಸಬಾರದು” ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಇದಕ್ಕೂ ಮುನ್ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂಬಿ ನರಗುಂದ್ ರಾಜ್ಯ ಸರ್ಕಾರದ ನಿರ್ಧಾರದ ಕುರಿತು ಕೇಂದ್ರದ ನಿಲುವನ್ನು ತಿಳಿಸಲು ರಾಜ್ಯ ಸರ್ಕಾರಗಳೊಂದಿಗೆ ಚರ್ಚೆ ನಡೆಸಬೇಕಿರುವುದರಿಂದ ಸಮಯಾವಕಾಶ ಕೇಳಿದ್ದರು.

ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ಕೆ ನವಡಗಿ ಹೈಕೋರ್ಟ್ ಗೆ ಈ ವಿಷಯವಾಗಿ ಮಾಹಿತಿ ನೀಡಿದ್ದು, ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಂಡು ನಾಲ್ಕು ಲಕ್ಷ ಮಂದಿ ವಿದ್ಯಾರ್ಥಿಗಳು ಈಗಾಗಲೇ ಪ್ರವೇಶ ಪಡೆದಿದ್ದಾರೆ. ಪ್ರವೇಶಾತಿಯೂ ಈಗ ಮುಕ್ತಾಯಗೊಂಡಿದೆ. ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು 12 ನೇ ತರಗತಿವರೆಗೂ ಕನ್ನಡ ಕಲಿತಿದ್ದಾರೆ. ಆದ್ದರಿಂದ ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಯುವುದಕ್ಕೆ ಅವರಿಗೆಲ್ಲಾ ಆಕ್ಷೇಪಗಳು ಇರಬಾರದು ಎಂದು ವಕೀಲರು ವಾದಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ ತನ್ನ ನಿಲುವನ್ನು 4 ವಾರಗಳಲ್ಲಿ ಸ್ಪಷ್ಟಪಡಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

Latest Indian news

Popular Stories

error: Content is protected !!