ಉಪಚುನಾವಣೆ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ ಅಲ್ಲ – ಯಡಿಯೂರಪ್ಪ ಯಾಕೆ ಹೀಗೆ ಹೇಳಿದ್ರು?

ಬೆಂಗಳೂರು: ಉಪಚುನಾವಣೆ ಫಲಿತಾಂಶ ಮುಂದಿನ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಾರದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಗೆಲುವು ಸಾಧಿಸಿದ್ದೇವೆ. ಕಾಂಗ್ರೆಸ್ ನಾಯಕರು ಏಕೆ ಹಿಗ್ಗುತ್ತಿದ್ದಾರೆಯೋ ಗೊತ್ತಿಲ್ಲ. ಹಾನಗಲ್‌ನ ಗೆಲುವು ಕಾಂಗ್ರೆಸ್ ಗೆಲುವು ಅಲ್ಲ. ಅದು ಶ್ರೀನಿವಾಸ್ ಮಾನೆ ಅವರ ಗೆಲುವು ಎಂದು ಹೇಳಿದರು.

ಮಾನೆ ಅವರು ಕ್ಷೇತ್ರದಲ್ಲಿ ಕೊರೊನಾ ಸಂಕಷ್ಟದಲ್ಲಿ ಓಡಾಟ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹಾನಗಲ್ ಅನ್ನು ಬಿಜೆಪಿ ಮತ್ತೆ ವಶಕ್ಕೆ ಪಡೆಯಲಿದೆ. ನಮ್ಮ ಮತಗಳು ಎಲ್ಲಿಯೂ ಹೋಗಿಲ್ಲ. ಕೇವಲ ಶೇ.2-3 ರಷ್ಟು ಮತಗಳಷ್ಟೇ ಆಚೆ ಈಚೆಯಾಗಿವೆ. ಹಾನಗಲ್ ನಲ್ಲಿ ಗೆಲ್ಲುವ ನಿರೀಕ್ಷೆಯಿತ್ತಾದರೂ ಏಕೆ ಹಿನ್ನಡೆಯಾಗಿದೆ ಎಂಬುದು ಗೊತ್ತಿಲ್ಲ. ಸಿಂಧಗಿಯಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಹಾನಗಲ್​ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹಿನ್ನಡೆ ಆಗಿದೆ. ಸಾಧಿಸಿದ್ದೇವೆಂದು ಕಾಂಗ್ರೆಸ್​​ ಸಂಭ್ರಮಿಸುವುದು ಬೇಡ. ಎಲ್ಲಿ ಎಡವಿದ್ದೇವೆ ಎಂದು ನಾವು ಚರ್ಚೆ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ಈ ಸೋಲನ್ನು ಸಿಎಂ ಒಬ್ಬರ ಮೇಲೆ ಹಾಕಲು ಆಗಲ್ಲ. ಎಲ್ಲರೂ ಕುಳಿತು ಸೋಲಿನ ಬಗ್ಗೆ ಚರ್ಚೆಯನ್ನು ಮಾಡ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Latest Indian news

Popular Stories

error: Content is protected !!