ಉಪ್ಪಿನಂಗಡಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

ಉಪ್ಪಿನಂಗಡಿ: ಇಲ್ಲಿನ ಕಲ್ಲೇರಿಯ ಶಿವಗಿರಿಯಲ್ಲಿ ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಕುಪ್ಪೆಟ್ಟಿ ನಿವಾಸಿ ಇಬ್ರಾಹಿಂ ಯಾನೆ ಅಬ್ಬೋನು ಎಂಬುವರ ಪುತ್ರ ಅಬೂಬಕರ್ ಸಿದ್ದೀಕ್ (16) ಎಂದು ಗುರುತಿಸಲಾಗಿದೆ.

ಸಿದ್ದಿಕ್ ತನ್ನ ಸ್ನೇಹಿತ ಮುಹಮ್ಮದ್ ಖಲೀಲ್ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಕರಾಯದಿಂದ ಕುಪ್ಪೆಟ್ಟಿ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಶಿವಗಿರಿ ಬಳಿ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಸವಾರರಿಬ್ಬರಿಗೂ ಗಂಭೀರ ಗಾಯಗಳಾಗಿವೆ.

ಚಿಕಿತ್ಸೆಗೆ ಸ್ಪಂದಿಸದೆ ಸಿದ್ದಿಕ್ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದು, ಖಲೀಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Latest Indian news

Popular Stories