ಎನ್.ಸಿ.ಬಿ ಅಧಿಕಾರಿ ಸಮೀರ್ ವಾಂಖೆಡೆ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಮುಂಬೈ: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿದ್ದ ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಅವರಿಗೆ ಮತ್ತೊಂದು ಕಂಟಕ ಸುತ್ತಿಕೊಂಡಿದೆ. ಅವರ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮುಂಬೈನ ವಕೀಲರೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಅವರು ಆರ್ಯನ್ ಖಾನ್ ಬಿಡುಗಡೆಗೆ 25 ಕೋಟಿ ರೂ. ಲಂಚ ಬೇಡಿಕೆ ಇಟ್ಟಿದ್ದಾಗಿ ಆರೋಪಗಳು ಕೇಳಿಬಂದಿದ್ದವು. ಅವರ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಇದೀಗ ಹೊಸ ಪ್ರಕರಣ ದಾಖಲಾಗುವುದರೊಂದಿಗೆ ಅವರ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾದಂತಾಗಿದೆ.

ಇದಕ್ಕೂ ಮುನ್ನ ವಾಂಖಡೆ ಅವರು ಬಾಂಬೆ ಹೈಕೋರ್ಟಿಗೆ ತೆರಳಿ ಮಹಾರಾಷ್ಟ್ರ ಸರ್ಕಾರ ತಮ್ಮ ವಿರುದ್ಧ ನಡೆಸುತ್ತಿರುವ ವಿಚಾರಣೆಗೆ ತಡೆ ನೀಡುವಂತೆ ಕೇಳಿಕೊಂಡಿದ್ದಾರೆ. ಅಲ್ಲದೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

Latest Indian news

Popular Stories

error: Content is protected !!