ಬೆಂಗಳೂರು:ಎರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ ಇನ್ನೂ ದಿನವೂ ಸಂಜೆಯ ಬಳಿಕ ಆಗಾಗ ಮುಖ ತೋರಿಸಿ ಹೋಗುತ್ತಿದ್ದಾನೆ.
ಕರ್ನಾಟಕದಲ್ಲಿ ವರುಣನ ಅಬ್ಬರ ಇನ್ನೂ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.
ಕರಾವಳಿಯಲ್ಲಿ ಇಂದು ಮುಂಜಾನೆ ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದೆ.