ಉಡುಪಿ, ಎ.10: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಗಾಂಧಿ ಆಸ್ಪತ್ರೆ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಕ್ರಮವನ್ನು ಹಿರಿಯ ಸಾಹಿತಿ ವೈದೇಹಿ ಉದ್ಘಾಟಿಸಲಿರುವರು. ಸ್ಥಾಪನಾ ದಿನಾಚರಣೆ ಕುರಿತು ಸಂಘದ ಸ್ಥಾಪಕಾ ಕೋಶಾಧಿಕಾರಿ ಹಾಗೂ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಪ್ರಧಾನ ವರದಿಗಾರ ಆರೀಫ್ ಪಡುಬಿದ್ರೆ ಮಾತನಾಡಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಎನ್.ಗುರುರಾಜ್, ದಿನೇಶ್ ಕಿಣಿ ಅಲೆವೂರು, ಕಿರಣ್ ಮಂಜನಬೈಲು, ಗೋಕುಲ್‌ದಾಸ್ ಪೈ, ಜಯಕರ ಸುವರ್ಣ, ಗಣೇಶ್ ಪ್ರಸಾದ್ ಪಾಂಡೇಲು ಅವರನ್ನು ಸನ್ಮಾನಿಸಲಾಗು ವುದು. ಸಂಘದ ಫೇಸ್‌ಬುಕ್ ಪೇಜ್ ಅನಾವರಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರು ವರು. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಗೌರವ ಉಪಸ್ಥಿತರಿರುವರು.
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು