ಏರೋ ಇಂಡಿಯಾ ಶೋ: ಯಲಹಂಕ ವಾಯುನೆಲೆಯ 10 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ!

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆಬ್ರವರಿ 13ರಿಂದ 17ರವರೆಗೂ ಐದು ದಿನಗಳ ಕಾಲ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.

Screenshot 2023 0128 073012 Featured Story, State News

ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರವರಿ 20ರವೆರಗೂ ಎಲ್ಲಾ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ. 

 ಈ ಅವಧಿಯಲ್ಲಿ  ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ. 

ಒಂದು ವೇಳೆ ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಭಾರತೀಯ ವಿಮಾನ ನಿಯಮ 1937 ನಿಯಮ 91ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

Latest Indian news

Popular Stories