ಐಪಿಎಸ್ ಅಧಿಕಾರಿ ರೂಪಾ ಅವರ ಆಡಿಯೋ ವೈರಲ್ – ಬೆಚ್ಚಿ ಬೀಳಿಸುವ ಮಾಹಿತಿ!

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ (D Roopa Moudgil) ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರ ನಡುವೆ ನಡೆಯುತ್ತಿದ್ದ ವೈಯಕ್ತಿಕ ಜಗಳಕ್ಕೆ ಸರ್ಕಾರ ಅವರನ್ನು ಸ್ಥಳವನ್ನು ಸೂಚಿಸದೆ ವರ್ಗಾವಣೆ ಮಾಡಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬಾರದು, ಸೋಷಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಬಾರದೆಂದು ತಾಕೀತು ಮಾಡುವ ಮೂಲಕ ವಿರಾಮ ಹಾಡಿತು ಎಂದು ಭಾವಿಸುತ್ತಿರುವಾಗಲೇ ಡಿ ರೂಪಾ ಅವರು ರೋಹಿಣಿ ಸಿಂಧೂರಿಯವರನ್ನು ಹಿಗ್ಗಾಮುಗ್ಗ ಬೈಯುತ್ತಿರುವ ಮತ್ತು ತಮ್ಮ ಸಂಸಾರದ ವಿಷಯಗಳನ್ನು ಎತ್ತಿದ ಆಡಿಯೊವೊಂದು ಇಂದು ಮಾಧ್ಯಮಗಳಿಗೆ ಲಭ್ಯವಾಗಿದೆ.

ಡಿ.ರೂಪಾ ಹಾಗೂ ಸಾಮಾಜಿಕ ಕಾರ್ಯಕರ್ತ ಗಂಗರಾಜು ನಡುವೆ ನಡೆದ ಸಂಭಾಷಣೆಯ ಆಡಿಯೋ ಹೊರ ಬಿದ್ದಿದ್ದು ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಂತಾಗಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪಗಳ ಸುರಿಮಳೆಗೈದ ರೂಪಾ ಅವರ ವಿರುದ್ಧ ದೂರು ನೀಡುವಂತೆ ಗಂಗರಾಜು ಮೇಲೆ ಒತ್ತಡ ಹೇರುತ್ತಿದ್ದಾರೆ. ರೋಹಿಣಿ ಫ್ಯಾಮಿಲಿದು ಲ್ಯಾಂಡ್ ಬ್ಯುಸಿನೆಸ್, ರಿಯಲ್ ಎಸ್ಟೇಟ್ ಬ್ಯುಸಿನೆಸ್. ಕಬಿನಿ ಹತ್ತಿರ ಒಂದು ಲ್ಯಾಂಡ್ ಇದೆ ಅಂತಾ ಪಹಣ್ ಕೊಟ್ಟಿ ನನ್ನ ಗಂಡ ಲ್ಯಾಂಡ್ ರೆಕಾರ್ಡ್ಸ್ ನಲ್ಲಿ ಇರೋದ್ರಿಂದ ಹೆಲ್ಪ್ ತಗೋಂಡಿದ್ದಾಳೆ. ಯಾರೋ ಬುಜ್ಜಮ್ಮ ಅನ್ನೋರ ಲ್ಯಾಂಡ್ ಎಷ್ಟೋ ಜನರ ಹೆಸರಲ್ಲಿದೆ ತಗೋಬಹುದಾ ಅಂತಾ ಒಪಿನಿಯನ್ ಕೇಳಿದ್ದಾಳೆ. ‘ನಮ್ಮವರನ್ನು ಬಳಸಿಕೊಂಡು ಲ್ಯಾಂಡ್ ಡೀಲ್ ಮಾಡಿದ್ದಾರೆ’ ​​‘ಗಂಡನ ರಿಯಲ್ ಎಸ್ಟೇಟ್​ ಪ್ರಮೋಟ್ ಮಾಡಲು ಮಾಹಿತಿ ಸಂಗ್ರಹಿಸಿದ್ದಾರೆ’ ‘ನಮ್ಮವರಿಂದ ರೋಹಿಣಿ ಸಿಂಧೂರಿ ಮಾಹಿತಿ ಪಡೆಯುತ್ತಿದ್ದಾರೆ’.

ಆಯಮ್ಮನ ದಿಸೆಯಿಂದ ನಮ್ಮ ಕುಟುಂಬ ಚೆನ್ನಾಗಿಲ್ವಲ್ಲ ಈಗ. ನಾನು ಅವರನ್ನ ಅಲ್ಲಿ ಇರೋಕೆ ಬಿಡಲ್ಲ. ನಾನೇ ಟ್ರಾನ್ಸ್ ಫರ್ ಗೆ ರಿಕ್ವೆಸ್ಟ್ ಮಾಡಿದ್ದೀನಿ. ಆಯಮ್ಮ ಕ್ಯಾನ್ಸರ್ ಇದ್ದ ಹಾಗೆ ಎಲ್ಲರನ್ನೂ ಬುಟ್ಟಿಗೆ ಹಾಕ್ಕೋಳ್ತಾಳೆ. ಡಿಕೆ ರವಿ ವಿಷ್ಯದಲ್ಲೂ ಆಗಿದ್ದು ಹಾಗೆನೇ. ನಾವು ನೋಡಿದ್ದೀವಲ್ಲ ಎಂದು ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಡಿ.ರೂಪಾ ಗಂಗರಾಜು ಜತೆ ಸಂಭಾಷಣೆ ವೇಳೆ ಆರೋಪ ಮಾಡಿದ್ದಾರೆ. ಸದ್ಯ ಈ ಆಡಿಯೋ ಈಗ ವೈರಲ್ ಆಗುತ್ತಿದೆ.

ರಾಜಕೀಯ ಪ್ರವೇಶಕ್ಕೆ ಚಿಂತನೆ: ಇನ್ನು ಆಡಿಯೊದಲ್ಲಿ ರೂಪಾ ಅವರು ರೋಹಿಣಿ ಸಿಂಧೂರಿಯವರು ತಮ್ಮ ಪ್ರಭಾವ ಬಳಸಿಕೊಂಡು ತಮ್ಮ ಪತಿಯ ಅಣ್ಣನನ್ನು ಬಿಜೆಪಿಗೆ ಸೇರಿಸುವ ಸಿದ್ಧತೆಯನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಮೈಸೂರು ಡಿಸಿಯಾಗಿದ್ದಾಗ ಕೇಳಿಬಂದ ಅಕ್ರಮ ಆರೋಪಗಳಿಂದ ಖುಲಾಸೆ ಪಡೆಯಲು ಶಾಸಕ ಸಾ ರಾ ಮಹೇಶ್ ಕೇಸನ್ನು ವಾಪಸ್ ಪಡೆಯಲು ಸಂಧಾನ ಮಾಡಲು ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ದೇವೇಗೌಡ, ಐಎಎಸ್ ರಮಣರೆಡ್ಡಿ ಮತ್ತು ಮಣಿವಣ್ಣನ್ ಮೂಲಕವೂ ಒತ್ತಡ ಹಾಕುವ ಕೆಲಸ ಮಾಡಿದ್ದಾರೆ ಎಂದು ಆಡಿಯೊದಲ್ಲಿ ರೂಪಾ ಆರೋಪಿಸಿದ್ದಾರೆ.

ಅದಲ್ಲದೆ ಆಡಿಯೊದಲ್ಲಿ ಗಂಗರಾಜು ಮೇಲೆ ರೂಪಾ ಹರಿಹಾಯ್ದಿದ್ದಾರೆ. ನೀವು ರೋಹಿಣಿ ಸಿಂಧೂರಿಯನ್ನು ಸಪೋರ್ಟ್ ಮಾಡುತ್ತಿದ್ದೀರಾ, ಊಸರವಳ್ಳಿ ಆಕೆ, ತನ್ನ ವೈಯಕ್ತಿಕ ಕೆಲಸ ಮಾಡಿಸಿಕೊಳ್ಳಲು ಹಲವರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಾಳೆ, ನೀವು ಫೈಲ್ ಹಿಡ್ಕೊಂಡು ಪದೇ ಪದೇ ಅವರ ಬಳಿ ಹೋಗುವುದೇನಿದೆ, ನನಗೆ ಬರುತ್ತಿರುವ ಕೋಪಕ್ಕೆ ಎದ್ದು ಹೋಗಿ ಅಲ್ಲಿಂದ ಆಚೆಗೆ ಎಂದು ಒಂದು ಹಂತದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಅವಾಚ್ಯ ಶಬ್ದಗಳಿಂದ ಸಂಭಾಷಣೆ ವೇಳೆ ರೂಪಾ ನಿಂದಿಸಿದ್ದಾರೆ.

Latest Indian news

Popular Stories