ವಿಜಯಪುರ: ಜೆಡಿಎಸ್‌ನಿಂದ ರೈತರಿಗೆ ಒಳ್ಳೆಯ ಕಾರ್ಯಕ್ರಮ ಕೊಡದೇ ಇದ್ರೇ ಜೆಡಿಎಸ್ ಪಕ್ಷ ವಿಸರ್ಜಿಸುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಪಂಚರತ್ನ ಯಾತ್ರೆಯ ಭಾಷಣದಲ್ಲಿ ಮಾತನಾಡಿದ ಅವರು, ರೈತರು ಸಾಲಗಾರರು ಆಗದಂತೆ ನೋಡಕೊಳ್ಳುತ್ತೇನೆ. ಒಂದು ವೇಳೆ ಜೆಡಿಎಸ್‌ನಿಂದ ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡಿದೇ ಹೋದ್ರೇ 2028 ರಲ್ಲಿ ಪಕ್ಷ ವಿಸರ್ಜಿಸುತ್ತೇನೆ. ಮುಂದೆ ನಿಮ್ಮ ಬಳಿ ಮತ ಕೇಳಲು ಬರಲ್ಲ ಎಂದರು.
ಅಲ್ಲದೇ, ಸಿಂದಗಿಯಲ್ಲಿ ಜನರು ದೇವೆಗೌಡರು ನೀಡಿದ್ದ ನೀರಾವರಿ ಯೋಜನೆ ನೆನಪಿಟ್ಟುಕೊಂಡಿದ್ದಾರೆ. ನಮ್ಮ ತಪ್ಪಿನಿಂದ ಕಳೆದ ಚುನಾವಣೆಯಲ್ಲಿ ಸೋಲುಂಡಿದ್ದೇವೆ. ಅಂದು ದೇವೆಗೌಡರನ್ನ ಬಹಳ ಪ್ರೀತಿಯಿಂದ ಸ್ವಾಗತಿಸಿದ್ದೀರಿ. ದೇವೆಗೌಡರ ಮೇಲೆ ನೀವಿಟ್ಟ ಪ್ರೀತಿ ಮರೆತಿಲ್ಲ ಎಂದರು.
ಅಲ್ಲದೇ, ಒಂದೆ ಪಕ್ಷದಲ್ಲಿದ್ದು ಕೆಸರು ಎರಚುತ್ತಿದ್ದಾರೆ. ಅವರ ಬಳಕೆ ಮಾಡುವ ಭಾಷೆ ನೋಡಿದ್ದೀರಾ? ವಿಜಯಪುರದ ನಾಯಕ, ಬಾಗಲಕೋಟೆ ಸಚಿವ ಎಂದು ಹೆಸರು ಹೇಳದೆ ನಿರಾಣಿ-ಯತ್ನಾಳ್ ಕಿತ್ತಾಟ ಪ್ರಸ್ತಾಪಿಸಿದರು. ಬಿಜೆಪಿ ಜನರ ತೆರಿಗೆ ಹಣ ಲೂಟಿ ಮಾಡ್ತಿದ್ದಾರೆ. ಕಾಂಗ್ರೆಸ್-ಬಿಜೆಪಿ ರೈತರಿಗಾಗಿ ಕಾರ್ಯಕ್ರಮ ಕೊಡಲಿಲ್ಲ ಎಂದು ವಾಗ್ದಾಳಿ ಮಾಡಿದರು.