ಒವೈಸಿಯ ದೆಹಲಿಯ ಮನೆ ಮೇಲೆ ಕಲ್ಲು ತೂರಾಟ

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದೆಹಲಿ ನಿವಾಸದ ಮೇಲೆ ಭಾನುವಾರ ಸಂಜೆ ಅಪರಿಚಿತ ದುಷ್ಕರ್ಮಿಗಳು ಕಲ್ಲುಗಳಿಂದ ದಾಳಿ ನಡೆಸಿದ್ದಾರೆ.

ಕಲ್ಲು ತೂರಾಟದಲ್ಲಿ ಕೆಲವು ಕಿಟಕಿಗಳಿಗೆ ಹಾನಿಯಾಗಿದೆ ಆದರೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ, ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ.

ನವದೆಹಲಿಯ ಅಶೋಕ ರಸ್ತೆಯಲ್ಲಿರುವ ಓವೈಸಿ ಅವರ ಮನೆಯಲ್ಲಿ ಸಂಜೆ 5.30 ರಿಂದ 6 ಗಂಟೆಯವರೆಗೆ ದಾಳಿ ನಡೆದಿದೆ. ಒವೈಸಿ ತಮ್ಮ ಮನೆಯ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Latest Indian news

Popular Stories