ಮಹಾರಾಷ್ಟ್ರ: ಖಾಸಗಿ ಬಸ್ಸೊಂದು ಕಂದಕಕ್ಕೆ ಬಿದ್ದ ಪರಿಣಾಮ ಕನಿಷ್ಠ 7 ಜನರು ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ದುರ್ಘಟನೆ ರಾಯಗಢದ ಪುಣೆ-ಮುಂಬಯಿ ಹೆದ್ದಾರಿಯಲ್ಲಿ ಶನಿವಾರ (ಎ.15)ಬೆಳಗ್ಗೆ ನಡೆದಿದೆ.
ಬಸ್ ನಲ್ಲಿ 41 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.ಸದ್ಯ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ.
ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.
ರಾಯಗಡ ಎಸ್ಪಿ ಸೋಮನಾಥ್ ಘರ್ಗೆ ಈ ಘಟನೆಯ ಬಗ್ಗೆ ಪ್ರತಿಕ್ರಿಯೆಸಿದ್ದು, ರಾಯಗಢದ ಖೋಪೋಲಿ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿದ್ದಾರೆ ಮತ್ತು 25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ .ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.