ಕಡಲ್ಕೊರೆತದ ಕುರಿತು ಅಗತ್ಯ ಕ್ರಮ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಕಾರವಾರ, ಮಂಗಳೂರುಗಳಲ್ಲಿ ಕಡಲ ಕೊರತೆವಾಗಿದೆ. ಡಿಸಿಗಳ ಖಾತೆಯಲ್ಲಿ ಹಣ ಇದೆ.  ಕಡಲ್ಕೊರೆತದ ಬಗ್ಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೇ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದೆಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ವರದಿಯ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದರು.

ಬಾದಾಮಿಯ ಕೆರೂರಿನಲ್ಲಿ ಕೋಮುಗಲಭೆ ಪ್ರಕರಣ ವಿಚಾರವಾಗಿ ಮಾತನಾಡಿದ ಸಿಎಂ, ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದೆ. ಕೂಡಲೇ ಪೊಲೀಸರು ಗಲಭೆ ನಿಯಂತ್ರಣ ಮಾಡಿದ್ದಾರೆ. ಕೆಲವರಿಗೆ ಗಾಯಗಳಾಗಿವೆ, ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರ ಬಂಧನವಾಗಿದೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿ‌ ಮಾಡಲಾಗಿದೆ. ಎರಡೂ ಸಮುದಾಯಗಳಿಗೂ ಶಾಂತವಾಗಿರಲು ಸೂಚಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಅಧಿಕಾರಿಗಳು ಕ್ರಮ ವಹಿಸಿದ್ದಾರೆ ಎಂದರು.

Latest Indian news

Popular Stories