ಉಡುಪಿ: ನಗರದ ಕಮಲಾಕ್ಷಿ ವಿವಿದ್ದೋದ್ದೇಶ ಸೊಸೈಟಿ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 7 ಮಂದಿ ಠೇವಣಿದಾರರು ಪೊಲೀಸರಿಗೆ ದೂರು ನೀಡಿದ್ದಾರೆ.ಕೋಟ್ಯಂತರ ರೂ. ವ್ಯವಹಾರ ನಡೆಸಿದ ಬಿವಿ ಲಕ್ಷ್ಮೀ ನಾರಾಯಣ ಅವರ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಜಾರಿ ನಿರ್ದೇಶನಾಲಯ ಪ್ರಕರಣದ ಮಾಹಿತಿ ಕಲೆ ಹಾಕಿದೆ.
ಗ್ರಾಹಕರಿಗೆ ನೂರಾರು ಕೋಟಿ ರೂ. ವಂಚನೆಯ ಆರೋಪ ಹೊತ್ತಿರುವ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿ ಅಧ್ಯಕ್ಷ ಬಿ.ವಿ. ಲಕ್ಷ್ಮೀನಾರಾಯಣರನ್ನು ಉಡುಪಿಯ ಸೆನ್ ಠಾಣೆಯ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.