ಕರಾವಳಿಯಲ್ಲಿ ಮುಂದುವರಿದ ಗಾಳಿ – ಮಳೆ ; ಸಮುದ್ರ ಪ್ರಕ್ಷುಬ್ಧ

ಉಡುಪಿ: ಕರಾವಳಿ ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆ ಮುಂದುವರಿದಿದೆ.ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಈಗಾಗಲೇ ಸುರಿಯುತ್ತಿರುವ ಗಾಳಿ ಭಾರೀ ಮಳೆಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದೆ.

IMG 20220625 0749171656134248900 Featured Story, Udupi

ಜೂನ್ 26ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್​ (Orange Alert) ಘೋಷಿಸಲಾಗಿದೆ. ಹಾಗೇ, ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್‌ (Yellow Alert) ಘೋಷಿಸಲಾಗಿದೆ.

IMG 20220624 1852311656134249065 Featured Story, Udupi

ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ ಅಬ್ಬರಿಸಲಿದೆ ಎಂದು ಹೇಳಿದೆ. ಈ ಮೂರು ಜಿಲ್ಲೆಗಳಿಗೆ 2 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಇಂದು ಮತ್ತು ಜೂ.26 ರಂದು ಗುಡುಗು ಸಹಿತ ಮಳೆಯ ನಿರೀಕ್ಷೆ ಇದೆ. ಹೀಗಾಗಿ, ಎರಡು ದಿನ ‘ಯೆಲ್ಲೋ ಅಲರ್ಟ್​’ ನೀಡಲಾಗಿದೆ.

Latest Indian news

Popular Stories