ಬೆಂಗಳೂರು, ದಕ್ಷಿಣ ಒಳನಾಡು, ಕರಾವಳಿಯ ಎಲ್ಲಾ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮೇ 11 ರಂದು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದ್ದಾರೆ.
ಬೆಂಗಳೂರು ನಗರ, ಸಿಂದಗಿ, ಬಾದಾಮಿ, ಆಳಂದ, ಚಿಕ್ಕಮಗಳೂರು, ಹುಕ್ಕೇರಿ, ಚಿಂತಾಮಣಿ, ಕಲಬುರಗಿ, ಬಿಳಗಿ, ಗೋಕಾಕ, ಕೋಲಾರ, ದೇವನಹಳ್ಳಿ, ಟಿ ನರಸೀಪುರದಲ್ಲಿ ಮಳೆಯಾಗಿದೆ. ಬೆಂಗಳೂರಲ್ಲಿ ಬೆಳಗ್ಗೆ ಶುಭ್ರ ಆಕಾಶವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿ ಸಮುದ್ರತೀರದಲ್ಲಿ ಕಾಣಿಸಿಕೊಂಡಿರುವ ಚಂಡಮಾರುತ ಮೋಚಾದಿಂದ ಕರ್ನಾಟಕದ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೇ 12ರವರೆಗೂ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.