ಹುಬ್ಬಳ್ಳಿ: ಕರ್ನಾಟಕದ ಹಾಲಿ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಇದ್ದು, ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಿಗೆ ತಿಳಿಯುತ್ತದೆ ಎಂದು ಮಾಜಿ ಸಿಎಂ, ಹುಬ್ಬಳ್ಳಿ-ಧಾರವಾಡ-ಮಧ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿ ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ.. ಅದನ್ನು ಜನರಿಗೆ ಬಿಡುತ್ತೇನೆ. ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕರಿಗೆ ತಿಳಿಯುತ್ತದೆ’ ಎಂದು ಕರ್ನಾಟಕದ ಮಾಜಿ ಸಿಎಂ, ಹುಬ್ಬಳ್ಳಿ-ಧಾರವಾಡ-ಮಧ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನಮಾನದ ಕುರಿತು ಮಾತನಾಡಿದ ಅವರು, “ಇದು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು, ಬಿಜೆಪಿಯಲ್ಲಿ ನನಗೆ ಗೌರವ ನೀಡಿಲ್ಲ ಮತ್ತು ನನ್ನನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ. ಕಾಂಗ್ರೆಸ್ ನಲ್ಲಿ ನನಗೆ ಯಾವುದೇ ಅಧಿಕಾರ ಅಥವಾ ಯಾವುದೂ ಬೇಡ..ನನಗೆ ಬೇಕಿರುವುದು ಕೇವಲ ಗೌರವ. ನನಗೆ ಆದ ಅಗೌರವದಿಂದ ನಾನು ಬಿಜೆಪಿ ತೊರೆಗು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ, ಅದು ನನಗೆ ನೋವುಂಟು ಮಾಡಿದೆ. ಬಿಜೆಪಿಯವರ ಉಪಚಾರ ನೋಡಿ ಎಷ್ಟೋ ಜನ ಕಾಂಗ್ರೆಸ್ ಸೇರತೊಡಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಕ್ಷೀಣಿಸುತ್ತಿದೆ ಮತ್ತು ಕಾಂಗ್ರೆಸ್‌ನ ಉದಯವನ್ನು ತೋರಿಸುತ್ತದೆ. ನನ್ನ ವಿಶ್ಲೇಷಣೆಯ ಪ್ರಕಾರ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದರು.
ಲಿಂಗಾಯತ ಸಿಎಂ ಕುರಿತ ಸಿದ್ದರಾಮಯ್ಯ ಹೇಳಿಕೆಯನ್ನು ಸಮರ್ಥಿಸಿಕೊಂಡ ಜಗದೀಶ್ ಶೆಟ್ಟರ್, ಸಿದ್ದರಾಮಯ್ಯ ಅವರ ಹೇಳಿಕೆ ಈಗಿನ ಸಿಎಂ ಬೊಮ್ಮಾಯಿ ವಿರುದ್ಧವೇ ಹೊರತು ಲಿಂಗಾಯತ ಸಮುದಾಯದ ವಿರುದ್ಧ ಅಲ್ಲ. ಅವರು ಎಲ್ಲಾ ಲಿಂಗಾಯತ ಸಿಎಂಗಳ ಬಗ್ಗೆ ಮಾತನಾಡಿಲ್ಲ. ಅವರು ಇತರ ಲಿಂಗಾಯತ ಸಿಎಂಗಳ ಬಗ್ಗೆ ಪ್ರತಿಕ್ರಿಯಿಸಲಿಲ್ಲ ಎಂದು ಹೇಳಿದರು.
ಇನ್ನು ಕರ್ನಾಟಕ ಪ್ರವಾಸದಲ್ಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಶೆಟ್ಟರ್ ಬಿಜೆಪಿ ತೊರೆದು, ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಹಾಲಿ ಚುನಾವಣೆಯಲ್ಲಿ ಶೆಟ್ಟರ್ ಸೋಲುತ್ತಾರೆ. ಹುಬ್ಬಳ್ಳಿ ಮತದಾರರು ಯಾವಾಗಲೂ ಬಿಜೆಪಿಗೆ ಮತ ಹಾಕಿದ್ದಾರೆ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂದು ಹೇಳಿದ್ದರು.