ಚೆನ್ನೈ: 25 ವರ್ಷದ ಯುವಕನ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಹಲವಾರು ಪೊಲೀಸ್ ಸಿಬ್ಬಂದಿಯನ್ನು ಕೊಲೆ ಆರೋಪದಲ್ಲಿ ಬಂಧಿಸಲು ನಿರ್ಧರಿಸಲಾಗಿದೆ.
ಈ ಹಿಂದೆ ಅನುಮಾನಾಸ್ಪದ ಸಾವಿನ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಮರಣೋತ್ತರ ಪರೀಕ್ಷೆಯ ನಂತರ ವಿಘ್ನೇಶ್‌ನ ದೇಹದ ಮೇಲೆ 13 ಗಾಯಗಳು ಕಂಡುಬಂದ ನಂತರ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.
25 ವರ್ಷದ ಯುವಕ ಕಳೆದ ತಿಂಗಳು ಗಾಂಜಾವನ್ನು ಸಾಗಿಸುತ್ತಿದ್ದ ಮತ್ತು ಪೊಲೀಸರ ಮೇಲೆ ದಾಳಿ ಮಾಡಲು ಪ್ರಯತ್ನಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ಒಂದು ದಿನದ ನಂತರ ಸಾವನ್ನಪ್ಪಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್ಸ್‌ಪೆಕ್ಟರ್, ಕಾನ್‌ಸ್ಟೆಬಲ್ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ನಿನ್ನೆ ಹಲವು ಪೊಲೀಸರನ್ನು ವಿಚಾರಣೆಗೆ ಕರೆಸಲಾಗಿತ್ತು.
“ನಾವು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯಿದೆಯನ್ನು ಸಹ ಅನ್ವಯಿಸುತ್ತೇವೆ. ನಂತರ ಎಷ್ಟು (ಪೊಲೀಸ್‌ಗಳನ್ನು) ಬಂಧಿಸಲಾಗುವುದು ಎಂಬ ಕುರಿತು ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ” ಎಂದು ಹಿರಿಯ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದರು.