ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು (Congress Manifesto) ಬಿಡುಗಡೆ ಮಾಡಿದೆ. ಕಾಂಗ್ರೆಸ್ ಬರಲಿದೆ, ಪ್ರಗತಿ ತರಲಿದೆ ಎನ್ನುವ ಘೋಷ ವಾಕ್ಯದೊಂದಿಗೆ ‘ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್ ಬದ್ಧತೆ’ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಡುಗಡೆಗೊಳಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ, ಪಿಎಫ್ಐ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇದರ ಜೊತೆಗೆ NEP ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನ ಮಾಡುವುದಾಗಿ ಹೇಳಿದೆ.