ಕಾಂಗ್ರೆಸ್ ದಲಿತರು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಗುಲಾಮರೆಂದು ಭಾವಿಸಿದೆ – ಸಚಿವ ಗೋವಿಂದ ಕಾರಜೋಳ

ಗದಗ: ದಲಿತರು ಹೊಟ್ಟೆಪಾಡಿಗೆ ಬಿಜೆಪಿ ಸೇರಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ. ಗದಗನಲ್ಲಿ ನಡೆದ ಜನಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಂಡು ಕಾರಜೋಳ ಮಾತನಾಡಿದರು.

ನೀವು ಅಕ್ಕಿ,ಕೋಳಿ, ಕುರಿ ಕೊಟ್ಟಿದ್ದೇನೆ ಎಂದು ಹೇಳಿದರೆ ಕೇಳುವವರು ಇಲ್ಲಿ ಯಾರೂ ಇಲ್ಲ. ದೀನ ದಲಿತರ ಉದ್ಧಾರ ಮಾಡಿದೇವೆ., ಅಲ್ಪಸಂಖ್ಯಾತರ ಕಲ್ಯಾಣ ಮಾಡಿದ್ದೇವೆ ಎಂದು ಸುಳ್ಳು ಹೇಳುವುದನ್ನು ನಿಲ್ಲಿಸಿ ಎಂದು ಕಾರಜೋಳ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷ ದೀನ ದಲಿತರನ್ನು ಮತ್ತು ಅಲ್ಪಸಂಖ್ಯಾತರನ್ನು ತನ್ನ ಗುಲಾಮರು ಎಂದು ಭಾವಿಸಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ನಿಮ್ಮ ಮನೆ ಬಾಗಿಲಿಗೆ ಬಂದರೆ ಛಿಮಾರಿ ಹಾಕಿ ಕಳಿಸಿ ಎಂದು ಕಾರಜೋಳ ಸಿಟ್ಟಿನಿಂದ ನುಡಿದರು.

Latest Indian news

Popular Stories

error: Content is protected !!