ಕಾಂಗ್ರೆಸ್ ಪರಿಸ್ಥಿತಿ ಮನೆಯೊಂದು ಮೂರು ಬಾಗಿಲಾಗಿದೆ – ಬಿಜೆಪಿ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಸಂಬಂಧ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. ಈ ಸಂಬಂದ ಸರಣಿ ಟ್ಟೀಟ್ ಮಾಡಿರುವ ಬಿಜೆಪಿ ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ? ಎಂದು ಪ್ರಶ್ನಿಸಿದೆ

ನಮ್ಮ ಸಂಪರ್ಕದಲ್ಲಿ ಆ ಪಕ್ಷದವರು ಇದ್ದಾರೆ, ಈ ಪಕ್ಷದವರು ಇದ್ದಾರೆ ಎಂದು ಕಳೆದ‌‌‌‌ ಕೆಲ ದಿನಗಳಿಂದ ‌ನಿರಂತರ ಬುರುಡೆ ಬಿಟ್ಟಾಗಲೇ ಅನುಮಾನವಿತ್ತು. ಈಗ ನೋಡಿದರೆ ತಮ್ಮ ಆಪ್ತರನ್ನೇ ಬೇರೆಯವರ ಸಂಪರ್ಕಕ್ಕೆ ಬಿಟ್ಟಿದ್ದಾರೆ, ಸಿದ್ದರಾಮಯ್ಯನವರೇ, ಮತ್ತೊಮ್ಮೆ ವಲಸೆಗೆ ವೇದಿಕೆ ಸೃಷ್ಟಿಸಿಕೊಳ್ಳುತ್ತಿದ್ದೀರಾ? ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯನವರೇ ನಿಮ್ಮ ಆಪ್ತರು ಆಪ್ ಹಾಗೂ ಸಮಾಜವಾದಿ ಪಕ್ಷದ‌ ನಾಯಕರ ಭೇಟಿ ಮಾಡಿರುವುದು ಆಕಸ್ಮಿಕ ಘಟನೆಯಾಗಿರಲು ಸಾಧ್ಯವಿಲ್ಲ. ಇದೊಂದು ವ್ಯವಸ್ಥಿತ ನಡೆ. ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶದ ಬಳಿಕ ಕರ್ನಾಟಕದಲ್ಲೂ ಇದರ ಪ್ರತಿಫಲನ ಕಾಣಬಹುದೇ? ಎಂದು ಬಿಜೆಪಿ ಕಾಲೆಳೆದಿದೆ.

ಇಷ್ಟು ದಿನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೇ ಸಿಎಂ ಗಾದಿಗೆ ಕಣ್ಣಿಟ್ಟಿದ್ದರು. ಈಗ ಎಂ.ಬಿ ಪಾಟೀಲ್ ಅವರು ಸೇರಿದ್ದಾರೆ, ಮುಂದಿನ ದಿನ ಕಾಂಗ್ರೆಸ್ ಕಲಹ ಶಮನವಾಗುವುದಿಲ್ಲ. ಮತ್ತಷ್ಟು ಉಲ್ಬಣಗೊಳ್ಳುವುದರಲ್ಲಿ ಸಂಶಯವಿಲ್ಲ. ಜನರು ಇವರ ಕನಸನ್ನು ನನಸು ಮಾಡಲು ಬಿಡುವುದಿಲ್ಲ. ಸುಳ್ಳು ಹೇಳುವುದರಲ್ಲಿ ಸದಾ ‘ಸಿದ್ದ’ರಾಮಯ್ಯ ಆಗಿರುವವರ ಸುಳ್ಳಿನ ಕೊಡ ಇನ್ನೇನು ತುಂಬಲಿದೆ. 2023 ರಲ್ಲಿ ಸ್ಪಷ್ಟ ಉತ್ತರ ಸಿಗಲಿದೆ, ಸಿದ್ದರಾಮಯ್ಯನವರೇ, ಪಲಾಯನಕ್ಕೆ ಸಿದ್ಧವಾಗಿರಿ ಎಂದು ಬಿಜೆಪಿ ಟೀಕಿಸಿದೆ.

ಕಾಂಗ್ರೆಸ್‌ ಪರಿಸ್ಥಿತಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ.ಕಾಂಗ್ರೆಸ್ ಸೇರುವವರ ಪಟ್ಟಿ ನಮ್ಮಲ್ಲಿದೆ ಎಂದು ಹೇಳುತ್ತಿರುವ ಕಾಂಗ್ರೆಸ್‌ ನಾಯಕರೇ, ಮೊದಲು ನಿಮ್ಮ ಪಕ್ಷದ ಬಾಗಿಲು ಭದ್ರಪಡಿಸಿಕೊಳ್ಳಿ.

ಕಾಂಗ್ರೆಸ್‌ ಕಲಹ ದಿಂದಾಗಿ ಇಬ್ರಾಹಿಂ ಅವರು ಪಕ್ಷ ತೊರೆಯುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಬೀಗ ಜಡಿಯುವ ಸಮಯ ದೂರವೇನಿಲ್ಲ ಎಂದು ಬಿಜೆಪಿ ಹೇಳಿದೆ.

Latest Indian news

Popular Stories

Social Media Auto Publish Powered By : XYZScripts.com
error: Content is protected !!