ಟ್ರಕ್ ವೊಂದು ಕಾರಿಗೆ ಢಿಕ್ಕಿ ಹೊಡೆದು, ಪಾದಚಾರಿಗಳ ಮೇಲೆ ಹರಿದ ಪರಿಣಾಮ 6 ಮಂದಿ ಮೃತಪಟ್ಟ ದಾರುಣ ಘಟನೆ ಲಕ್ನೋ-ಕಾನ್ಪುರ ಹೆದ್ದಾರಿಯ ಅಚಲಗಂಜ್ ದಲ್ಲಿ ಭಾನುವಾರ (ಜ.22 ರಂದು) ನಡೆದಿದೆ.
ಭಾನುವಾರ ಸಂಜೆ 7 ಗಂಟೆಯ ಸಮಯದಲ್ಲಿ ಲಕ್ನೋ-ಕಾನ್ಪುರ ಹೆದ್ದಾರಿಯ ಅಚಲಗಂಜ್ ದಲ್ಲಿ ವೇಗವಾಗಿ ಬಂದ ಟ್ರಕ್ ವೊಂದು ಕಾರಿಗೆ ಢಿಕ್ಕಿ ಹೊಡೆದು ಪಾದಚಾರಿಗಳ ಮೇಲೆ ಹರಿದಿದೆ. ಕೆಲ ದೂರ ಕಾರನ್ನು ಎಳೆದುಕೊಂಡೇ ಹೋದ ಪರಿಣಾಮ ಕಾರು ಕಂದಕಕ್ಕೆ ಉರುಳಿದೆ.
ರಸ್ತೆಯಲ್ಲಿದ್ದ ಮಹಿಳೆ,ಮಗಳು ಸೇರಿದಂತೆ ಘಟನೆಯಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ. ಮೃತರನ್ನು ಛೋಟ್ಟೆಲಾಲ್ (32), ಶಿವಾಂಗ್ (30), ವಿಮಲೇಶ್ (60), ರಾಂಪ್ಯಾರಿ (45) ಮತ್ತು ಆಕೆಯ ಮಗಳು ಶಿವಾನಿ (13) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಬಳಿಕ ಸ್ಥಳೀಯರು ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು.