ಕುಂದಾಪುರ: ಎಪ್ರಿಲ್ 13 ರಂದು ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಎಪ್ರಿಲ್ 13 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಕುಂದಾಪುರದ ಶಾಸ್ತ್ರಿ ಸರ್ಕಲ್ನ ಪೋಲಿಸ್ ಚೌಕಿ ಬಳಿ ಸಾರ್ವಜನಿಕ ಸಭೆ ನಡೆಸಿ ಆ ಬಳಿಕ ಚುನಾವಣಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಮತ್ತು ಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸಭಾಪತಿ, ಕಾಂಗ್ರೆಸ್ ಹಿರಿಯ ನಾಯಕ ಪ್ರತಾಪಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷರುಗಳಾದ ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ, ವಿನಯಕುಮಾರ್ ಸೊರಕೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಏ ಗಫೂರ್, ಮಾಜಿ ಶಾಸಕ ಗೋಪಾಲ ಪೂಜಾರಿ, ಕಾಂಗ್ರೆಸ್ ಹಿರಿಯ ನಾಯಕ ಮಲ್ಯಾಡಿ ಶಿವರಾಮ ಶೆಟ್ಟಿ ಮುಂತಾದ ನಾಯಕರುಗಳು ಉಪಸ್ಥಿತರಿರಲಿದ್ದಾರೆ. ಆ ಪ್ರಯುಕ್ತ ಪಕ್ಷದ ಜನಪ್ರತಿನಿಧಿಗಳು, ಪದಾದಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಭಾಗವಹಿಸುವಂತೆ ಈ ಮೂಲಕ ವಿನಂತಿಸಲಾಗಿದೆ.

Latest Indian news

Popular Stories