ಕುಂದಾಪುರ: ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಲ್ಲೂರು ಸಮೀಪದ ರಾಜಾಡಿ ಸೇತುವೆ ಬಳಿ ನಡೆದಿದೆ.
ಕನ್ಯಾನ ಗ್ರಾಮದ ಗುಡ್ಡೆಯಂಗಡಿ ನಿವಾಸಿ ರವಿರಾಜ್ ಶೆಟ್ಟಿ (33) ಆತ್ಮಹತ್ಯೆ ಮಾಡಿಕೊಂಡ ಯುವಕ.
ಅನಾರೋಗ್ಯದಿಂದ ಬಳಲುತ್ತಿದ್ದ ರವಿರಾಜ್ ಶನಿವಾರ ಬೆಳಿಗ್ಗೆ ತನ್ನ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಚಿಕಿತ್ಸೆ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಇದ್ದಕ್ಕಿದ್ದಂತೆ ತಲ್ಲೂರು ಸಮೀಪದ ರಾಜಾಡಿಯ ಹೆದ್ದಾರಿಯಲ್ಲಿರುವ ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತದೇಹ ಮೇಲೆತ್ತಲು ಸ್ಥಳೀಯ ಯುವಕರು ಸಹಕರಿಸಿದ್ದಾರೆ. ಸ್ಥಳದಲ್ಲಿ ನೂರಾರು ಮಂದಿ ಜಮಾಯಿಸಿದ್ದರಿಂದ ಕೆಲಕಾಲ ರಾಜಾಡಿ ಸೇತುವೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.