ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ನೀಡುವ ‘ಗೃಹಲಕ್ಷ್ಮಿ’ ಯೋಜನೆ; ಕಾಂಗ್ರೆಸ್ ಗ್ಯಾರಂಟಿ ನಂಬರ್ 2!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಈಗಾಗಲೇ ಬಹುತೇಕ ಪ್ರಚಾರ ಕಾರ್ಯ ಆರಂಭಿಸಿದ್ದು, ಜನರನ್ನು ಸೆಳೆಯಲು ವಿವಿಧ ಯೋಜನೆಗಳನ್ನು ಪ್ರಕಟಿಸಲಾಗುತ್ತಿದೆ. 

ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳು 2,000 ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಕಾಂಗ್ರೆಸ್ ಇಂದು ಪ್ರಕಟಿಸಿದೆ. ನಗರದ ಅರಮನೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ನಾ ನಾಯಕಿ’ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಈ ಯೋಜನೆಗೆ ಸಂಬಂಧಿಸಿದ ಭಿತ್ತ ಪತ್ರ ಅನಾವರಣ ಮೂಲಕ ಅಧಿಕೃತವಾಗಿ ಯೋಜನೆಯನ್ನು ಘೋಷಿಸಿದರು. 

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರಕ್ಕೇರಿದರೆ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ರೂ. 2,000 ನೀಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. 

ರಾಜ್ಯದ ಮಹಿಳೆಯರೇ ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ. 

Latest Indian news

Popular Stories