ಕೇರಳ: ಕನ್ನಡದ ಸೂಪರ್‌ಹಿಟ್ ಚಲನಚಿತ್ರ ‘ಕಾಂತಾರ’ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರು ಇಲ್ಲಿನ ತನಿಖಾಧಿಕಾರಿಗಳ ಮುಂದೆ ಹಾಜರಾಗಿ ಚಿತ್ರದ ಹಾಡಿನಲ್ಲಿ ಕೃತಿಚೌರ್ಯ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಿಕೊಂಡರು.
ಹೈಕೋರ್ಟ್ ನಿರ್ದೇಶನದ ಮೇರೆಗೆ ನಿರ್ಮಾಪಕ ವಿಜಯ್ ಕಿರ್ಗಂದೂರು ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಭಾನುವಾರ ಕೋಝಿಕ್ಕೋಡ್ ನಗರ ಪೊಲೀಸರ ಮುಂದೆ ಹಾಜರಾಗಿದ್ದರು.
“ನ್ಯಾಯಾಲಯದ ನಿರ್ದೇಶನದಂತೆ ಅವರು ತನಿಖಾಧಿಕಾರಿಯ ಮುಂದೆ ಹಾಜರಾಗಿದ್ದಾರೆ. ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಅಗತ್ಯವಿದ್ದರೆ, ಅವರನ್ನು ಮತ್ತೆ ಕರೆಯಲಾಗುವುದು” ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.