ಕೃಷ್ಣ ಮಠಕ್ಕೆ ಸಣ್ಣ ತೊಂದರೆಯಾದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆಂದು ಅಂದಿನ ಮುಖ್ಯಮಂತ್ರಿಗೆ ಹೇಳಿದ್ದೆ – ಪ್ರಮೋದ್ ಮಧ್ವರಾಜ್

ಉಡುಪಿ: ಪ್ರಮೋದ್ ಮಧ್ವರಾಜ್ ಅವರು ತನ್ನ ಹೇಳಿಕೆಯಿಂದ ಇತ್ತೀಚ್ಚಿಗೆ ಗಮನಸೆಳೆಯುತ್ತಿದ್ದಾರೆ. ಇದೀಗ ಅವರ ಮತ್ತೊಂದು ಹೇಳಿಕೆ ವೈರಲಾಗುತ್ತಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉಡುಪಿ ಶ್ರೀ ಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸುವ ವಿಷಯ ಗೊತ್ತಾದಾಗ ನಾನೇ ಸಿದ್ಧರಾಮಯ್ಯ ಬಳಿಗೆ ಹೋಗಿ ,ಮಠವನ್ನು ವಶಪಡಿಸಿಕೊಂಡರೆ ಮೊದಲಿಗೆ ನಾನೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡುವುದು ಇದೇ ಮೊದಲಲ್ಲ.ಈ ಮುಂಚೆ ಕೂಡ ಮೋದಿಯವರನ್ನು ಹೊಗಳಿ ನೀಡಿದ್ದ ಹೇಳಿಕೆಯಿಂದಾಗಿ ಬಹಳಷ್ಟು ಚರ್ಚೆ ರೂಪುಗೊಂಡಿತ್ತು.ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮತ್ತು ನಾಯಕರಿಗೆ ಮತ್ತೊಮ್ಮೆ ಇರಿಸುಮುರಿಸು ಉಂಟು ಮಾಡಿದ್ದಾರೆ.

ಕೃಷ್ಣಮಠದ ರಾಜಾಂಗಣದಲ್ಲಿ ಅದಮಾರು ಪರ್ಯಾಯ ಸಮಾಪನ ಪ್ರಯುಕ್ತ ನಡೆಯುತ್ತಿರುವ ‘ವಿಶ್ವಾರ್ಪಣಂ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಮಾತನಾಡುತ್ತ ಈ ಹೇಳಿಕೆ ನೀಡಿದ್ದಾರೆ.

ಮಧ್ವಾಚಾರ್ಯರು ಪ್ರತಿಷ್ಠಾಪಿಸಿದ ಮಠಕ್ಕೆ ಎಂಟುನೂರು ವರ್ಷಗಳ ಇತಿಹಾಸ ಇದೆ.ದೇಶವಿದೇಶಗಳಲ್ಲಿ ಭಕ್ತರನ್ನು ಹೊಂದಿರುವ ಮಠ ,ಉಡುಪಿ ಜನರಿಗೊಂದು ಭಾಗ್ಯ.ಆದರೆ ನಮ್ಮದೇ ಸರಕಾರ ಇದನ್ನು ವಶಪಡಿಸಲು ಮುಂದಾಗಿತ್ತು.ಆಗ ನಾನು ಮಠವನ್ನು ಮುಟ್ಟಿದರೆ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯನವರಿಗೆ ಹೇಳಿದ್ದೆ ಎಂದು ನೆನಪಿಸಿಕೊಂಡರು.ಈ ವಿಷಯ ನನ್ನ‌ ಒಳಗೇ ಇತ್ತು.ಇದನ್ನು ಹೇಳುವುದಿಲ್ಲ ಎಂದುಕೊಂಡಿದ್ದೆ.ಆದರೆ ಇವತ್ತು ಹೇಳಬೇಕಾಯಿತು ಎಂದು ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರ ಹೇಳಿಕೆಗಳು ಇದೀಗ ಇವರು ಬಿಜೆಪಿ ಸೇರುವ ಸಾಧ್ಯತೆಯನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದೆ.

Latest Indian news

Popular Stories

error: Content is protected !!