ಕೆಲ ವರ್ಗದವರಿಗೆ ಅರ್ಥ ಮಾಡಿಸಲಾಗದೆ ಕೃಷಿ ಕಾಯಿದೆ ವಾಪಸ್ – ಕೃಷಿ ಸಚಿವ ಬಿಸಿ ಪಾಟೀಲ್

ಬೆಂಗಳೂರು: ಕೆಲ ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೆ 3 ಕೃಷಿ ಮಸೂದೆಗಳ ರದ್ದುಪಡಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಬೆಳಿಗ್ಗೆ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿಯವರು, 3 ಕೃಷಿ ಮಸೂದೆಗಳ ರದ್ದುಪಡಿಸುವುದಾಗಿ ಘೋಷಣೆ ಮಾಡಿದ್ದರು.

ಕೇಂದ್ರ ಸರ್ಕಾರ ಈ ನಿರ್ಧಾರ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿ.ಸಿ.ಪಾಟೀಲ್ ಅವರು, ನೂತನ ಮೂರು ಕೃಷಿ ಕಾನೂನುಗಳ ಉದ್ದೇಶಗಳನ್ನು ಕೆಲವು ವರ್ಗದವರಿಗೆ ಅರ್ಥ ಮಾಡಿಸಲು ಸಾಧ್ಯವಾಗದೇ ಇರುವುದರಿಂದ ಕೇಂದ್ರ ಸರ್ಕಾರ ಅವುಗಳನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈತರಿಗೆ ಸಮಂಜಸವಾದ ದರದಲ್ಲಿ ಬಿತ್ತನೆಬೀಜಗಳನ್ನು ಒದಗಿಸಲು ಮತ್ತು ಸೂಕ್ಷ್ಮ ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸಲು ನಾವು ಕೆಲಸ ಮಾಡಿದ್ದೇವೆ. ಇಂತಹ ಅಂಶಗಳು ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಕಾರಣವಾಗಿವೆ.ಆದರೂ ನೂತನ ಕೃಷಿ ಕಾಯಿದೆಗಳು ಎಲ್ಲರಿಗೂ ಸಮ್ಮತವಾಗದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅವುಗಳನ್ನು ಹಿಂತೆಗೆದುಕೊಳ್ಳು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.

Latest Indian news

Popular Stories

error: Content is protected !!